ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಸಂಜಯನಗರದಲ್ಲಿ ಮಗುವಿಗೆ ಉಪಹಾರ ತರಲು ಬೈಕ್ ನಲ್ಲಿ ಹೋಗುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸವಾರ ಮೃತಪಟ್ಟಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರೋಶನ್ ಎಂಬ ವ್ಯಕ್ತಿ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದು , ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಸವಾರ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.