ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ಇಂದು ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ಕರೆಯಲಾಗಿತ್ತು. ಈ ಸಭೆಯನ್ನು 5 ಗಂಟೆಗೆ ನಿಗದಿ ಪಡಿಸಿದ್ದನ್ನು, ಸಂಜೆ 7.30ಕ್ಕೆ ಮುಂದೂಡಲಾಗಿದೆ.
ರಾಜ್ಯ ಸಚಿವ ಸಂಪುಟದ ಸರ್ಕಾರದ ಅಪರ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಇಂದು ಸಂಜೆ 5 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದ ಸಚಿವ ಸಂಪುಟದ ವಿಶೇಷ ಸಭೆಯನ್ನು ಸಂಜೆ 7.30ಕ್ಕೆ ಮುಂದೂಡಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.