ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ.ವೀರೇಂದ್ರ ಹೆಗಡೆ ಅವರು ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಅದು ಏನು ಅಂತ ಮುಂದೆ ಓದಿ.
ಇಂದು ಸುದ್ದಿಗಾರರೊಂದಿಗೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವಂತ ಅವರು, ಧರ್ಮಸ್ಥಳದ ಬಗ್ಗೆ ಅನಗತ್ಯವಾಗಿ ಗೊಂದಲ ಮೂಡಿಸಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ತರಾವರಿಯಾಗಿ ಸುದ್ದಿ ಪ್ರಕಟಿಸಲಾಗುತ್ತಿದೆ ಎಂದರು.
ಎಸ್ಐಟಿ ಬಗ್ಗೆ ನನಗೆ ನಂಬಿಕೆಯಿದೆ. ಉತ್ತಮ ರೀತಿಯಲ್ಲಿ ಕೆಲಸ ಮಾಡಿ, ಸತ್ಯವನ್ನು ಹೊರ ತರಲಿದೆ. ಸಿಬಿಐ ತನಿಖೆಗೆ ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದರು.
VIDEO | Dharmasthala Dharmadhikari Veerendra Heggade hints at a conspiracy behind mass burial allegations; says the SIT will reveal the truth.
(Full video available on PTI Videos- https://t.co/dv5TRARJn4) pic.twitter.com/YkTG6nKz9x
— Press Trust of India (@PTI_News) August 19, 2025
ಅಂದಹಾಗೇ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ನಡೆಸಲಾಗುತ್ತಿದೆ. ಮಾಸ್ಕ್ ಮ್ಯಾನ್ ತೋರಿಸಿದಂತ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಉತ್ಖನನಗ ವೇಳೆಯಲ್ಲಿ ಎರಡು ಸ್ಥಳಗಳಲ್ಲಿ ಮಾತ್ರವೇ ಅಸ್ಥಿ ಪಂಜರಗಳು ದೊರೆತಿವೆ. ಸದ್ಯ ತಾತ್ಕಾಲಿಕವಾಗಿ ಶೋಧ ಕಾರ್ಯಾಚರಣೆಗೆ ಬ್ರೇಕ್ ಹಾಕಲಾಗಿದೆ. ಎಸ್ಐಟಿಯು ಮಾಸ್ಕ್ ಮ್ಯಾನ್ ಅನ್ನು ಈ ವಿಚಾರವಾಗಿ ವಿಚಾರಣೆ ನಡೆಸುತ್ತಿದೆ.
ನಿನ್ನೆ ಇದೇ ವಿಚಾರ ಕೂಡ ವಿಧಾನಸಭೆಯಲ್ಲಿ ಚರ್ಚೆಯಾಗಿತ್ತು. ಗೃಹ ಸಚಿವ ಡಾ.ಜಿ ಪರಮೇಶ್ವರ್ ಕೂಡ ವಿಪಕ್ಷಗಳ ಸದಸ್ಯರ ಪ್ರಶ್ನೆಗೆ ಉತ್ತರಿಸಿದ್ದರು. ಮಾಸ್ಕ್ ಮ್ಯಾನ್ ತಿಳಿಸಿದಂತ ತನಿಖೆ ನಡೆಸಲಾಗುತ್ತಿದೆ. ತೋರಿಸಿದಂತ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಮಾಡಲಾಗಿದೆ. ಈವರೆಗೆ ಮೂಳೆ, ತಲೆ ಬುರುಡೆ ಎರಡು ಸ್ಥಳದಲ್ಲಿ ಸಿಕ್ಕಿವೆ. ಸದ್ಯ ತಾತ್ಕಾಲಿಕವಾಗಿ ಶೋಧ ಕಾರ್ಯಾಚರಣೆ ನಿಲ್ಲಿಸಲಾಗಿದೆ. ಯಾರೇ ತಪ್ಪು ಮಾಡಿದರೂ ಕಾನೂನು ಕ್ರಮ ಆಗಲಿದೆ ಎಂದಿದ್ದರು.