Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಎಡಗೈಗೆ 6%, ಬಲ ಸಮುದಾಯಕ್ಕೆ 6%, ಸ್ಪೃಶ್ಯ ಸಮುದಾಯಕ್ಕೆ 5% ಮೀಸಲಾತಿ: ಸಿಎಂ ಸಿದ್ಧರಾಮಯ್ಯ ಘೋಷಣೆ

20/08/2025 4:24 PM

‘SC ಒಳಮೀಸಲಾತಿ’ ವಿಚಾರ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಮಾತಿನ ಹೈಲೈಟ್ಸ್

20/08/2025 4:19 PM

BREAKING: ಒಳ ಮೀಸಲಾತಿ ಹೋರಾಟದ ಮೊಕದ್ದಮೆ ಹಿಂಪಡೆಯಲು ಸರ್ಕಾರ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

20/08/2025 4:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘SC ಒಳಮೀಸಲಾತಿ’ ವಿಚಾರ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಮಾತಿನ ಹೈಲೈಟ್ಸ್
KARNATAKA

‘SC ಒಳಮೀಸಲಾತಿ’ ವಿಚಾರ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಮಾತಿನ ಹೈಲೈಟ್ಸ್

By kannadanewsnow0920/08/2025 4:19 PM

ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ಮಾತನಾಡಿದರು. ಅವರ ಮಾತಿನ ಪ್ರಮುಖ ಹೈಲೈಟ್ಸ್ ಮುಂದೆ ಓದಿ.

1.​ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ದಿನಾಂಕ:01.08.2024 ರಂದು ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ

“ The provision provides the State with the power to make “any” special provisions for the Schedules castes and the Scheduled Tribes. Thereby, it recognizes the wide power of the State to employ a range of means to secure substantive equality. This would include sub-classification within the Scheduled Castes.”

ಎಂದು ತೀರ್ಪು ನೀಡಿದೆ. ಅಂದರೆ, ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಸಾಂವಿಧಾನಿಕವಾಗಿ ದತ್ತವಾಗಿದೆ ಎಂದು ಸ್ಪಷ್ಟವಾಗಿ ಹೇಳಿದೆ. ಸಂವಿಧಾನದ ಅನುಚ್ಚೇದ 14, 15 ಮತ್ತು 16 ರಲ್ಲಿ ತಿಳಿಯಪಡಿಸಿರುವ ಸಮ…

1.​ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ದಿನಾಂಕ:01.08.2024 ರಂದು ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ

“ The provision provides the State with the power to make “any” special provisions for the Schedules castes and the Scheduled Tribes. Thereby, it recognizes the wide power of the State to employ a range of means to secure substantive equality. This would include sub-classification within the Scheduled Castes.”

ಎಂದು ತೀರ್ಪು ನೀಡಿದೆ. ಅಂದರೆ, ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಸಾಂವಿಧಾನಿಕವಾಗಿ ದತ್ತವಾಗಿದೆ ಎಂದು ಸ್ಪಷ್ಟವಾಗಿ ಹೇಳಿದೆ. ಸಂವಿಧಾನದ ಅನುಚ್ಚೇದ 14, 15 ಮತ್ತು 16 ರಲ್ಲಿ ತಿಳಿಯಪಡಿಸಿರುವ ಸಮಾನತೆಯ ತತ್ವಕ್ಕೆ ಯಾವುದೇ ಚ್ಯುತಿ ಬಾರದಂತೆ ಅದರ ಮೂಲ ಆಶಯವನ್ನು ಸದೃಢಗೊಳಿಸುವ ದೃಷ್ಟಿಯಿಂದ ಒಳ ಮೀಸಲಾತಿ ವ್ಯವಸ್ಥೆ ಕಲ್ಪಿಸಬಹುದು ಎಂದು ಅಭಿಪ್ರಾಯಪಟ್ಟಿದೆ.

2.​ಈ ಹಿನ್ನೆಲೆಯಲ್ಲಿ, ನಮ್ಮ ಸರ್ಕಾರವು ದಿನಾಂಕ: 12.11.2024 ರಂದು ಆದೇಶ ಸಂಖ್ಯೆ ಎಸ್‌ಡಬ್ಲೂö್ಯಡಿ/8/ಎಸ್‌ಎಲ್‌ಪಿ/2024(ಪಿ-1)ರ ಆದೇಶದ ಪ್ರಕಾರ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ದಾಸ್ ಅವರ ಏಕ ಸದಸ್ಯ ಆಯೋಗವನ್ನು ರಚಿಸಲಾಯಿತು. ಸದರಿ ಆಯೋಗವು ಸೂಕ್ತ ದತ್ತಾಂಶಗಳನ್ನು (Empirical Data) ಸಂಗ್ರಹಿಸಿ, ಒಳ ಮೀಸಲಾತಿ ನೀಡುವ ಕುರಿತು ಶಿಫಾರಸ್ಸುಗಳನ್ನು ಮಾಡಲು ಕೋರಲಾಯಿತು.

3.​ಜಸ್ಟೀಸ್ ಹೆಚ್.ಎನ್. ನಾಗಮೋಹನ್‌ದಾಸ್ ಅವರ ಆಯೋಗವು ರಾಜ್ಯದ 101 ಪರಿಶಿಷ್ಟ ಜಾತಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ ದಿನಾಂಕ:01.08.2025 ರಂದು ವರದಿಯನ್ನು ಸಲ್ಲಿಸಿತು. ಆಯೋಗವು ಪರಿಶಿಷ್ಟ ಜಾತಿಗಳಿಗೆ ಸೇರಿದ 1,05,09,871 ಜನರ ದತ್ತಾಂಶಗಳನ್ನು ಸಂಗ್ರಹಿಸಿದೆ. ಶೇ.93 ರಷ್ಟು ಪರಿಶಿಷ್ಟ ಜಾತಿಗಳ ಜನಸಂಖ್ಯೆಯು ಈ ಸಮೀಕ್ಷೆಗೆ ಲಭ್ಯವಾಗಿದೆ. ಸಚಿವ ಸಂಪುಟವು ಈ ವರದಿಯನ್ನು ಕೂಲಂಕಶವಾಗಿ ಪರಿಶೀಲಿಸಿದೆ.

4.​ ದಿನಾಂಕ 19-8-2025 ರಂದು ನಡೆದ ಸಚಿವ ಸಂಪುಟದಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ.

1)​ಎಡಗೈ ಸಂಬ0ಧಿತ ಜಾತಿಗಳೆಂದು ಆಯೋಗವು ಗುರ್ತಿಸಿರುವ ಸಮುದಾಯಗಳಿಗೆ ಶೇ.6 ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ.

2)​ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಪರಯ, ಮೊಗೇರ ಮುಂತಾದ ಬಲಗೈ ಸಂಬ0ಧಿತ ಜಾತಿಗಳನ್ನು ಎಡಗೈ ಸಂಬ0ಧಿತ ಜಾತಿಗಳ ಜೊತೆ ಸೇರಿಸಲಾಗಿದೆ ಎಂಬುದನ್ನು ಗಮನಿಸಿದ ಸಚಿವ ಸಂಪುಟವು ಈ ಜಾತಿಗಳನ್ನು ಬಲಗೈ ಸಂಬ0ಧಿತ ಜಾತಿಗಳ ಜೊತೆ ಸೇರಿಸಿ ಬಲಗೈ ಸಂಬ0ಧಿತ ಜಾತಿಗಳ ಸಮೂಹಕ್ಕೆ ಶೇ.6 ರಷ್ಟು ಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ.

3)​ಇದರ ಜೊತೆಯಲ್ಲಿ ಆದಿ ಕರ್ನಾಟಕ, ಆದಿ ಆಂಧ್ರ, ಆದಿ ದ್ರಾವಿಡ ಗುಂಪುಗಳಲ್ಲಿನ 4,74,954 ಜನಸಂಖ್ಯೆಯನ್ನು ಎಡಗೈ ಸಂಬ0ಧಿತ ಮತ್ತು ಬಲಗೈ ಸಂಬ0ಧಿತ ಜಾತಿಗಳ ಜೊತೆ ಸಮಾನವಾಗಿ ಹಂಚಿಕೆ ಮಾಡಲು ತೀರ್ಮಾನಿಸಿದ್ದೇವೆ.

4)​ಸ್ಪೃಶ್ಯ ಜಾತಿಗಳ ಗುಂಪಿಗೆ ಜಸ್ಟೀಸ್ ನಾಗಮೋಹನ್ ದಾಸ್ ಅವರು ಶೇ. 4 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಹಾಗೆಯೇ 59 ಜಾತಿಗಳ 5,22,099 ಜನಸಂಖ್ಯೆಯನ್ನು ಪ್ರವರ್ಗ-ಎ ಎಂದು ತೀರ್ಮಾನಿಸಿ ಶೇ.1 ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಕೆಲವು ತಾಂತ್ರಿಕ ಕಾರಣಗಳಿಂದ ಈ ಎರಡೂ ಗುಂಪುಗಳನ್ನು ಒಟ್ಟಿಗೆ ಸೇರಿಸಿ ಶೇ.5 ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ.

5)​ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬ0ಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ – ಶೇ. 6, ಬಲಗೈ ಸಂಬ0ಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ. 6 ಹಾಗೂ ಸಿ ಪ್ರವರ್ಗಕ್ಕೆ – ಶೇ.5 ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಿದ್ದೇವೆ. ಪರಿಶಿಷ್ಟ ಜಾತಿಗಳಲ್ಲಿರುವ ಎಲ್ಲಾ 101 ಜಾತಿಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಹಾಗೂ ಇನ್ನಿತರೆ ವಿಷಯಗಳಲ್ಲಿ ಅವಕಾಶಗಳನ್ನು ಒದಗಿಸುವಲ್ಲಿ ಸಮಾನತೆ ಮತ್ತು ನ್ಯಾಯ ಸಮ್ಮತತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಈ ಮಾರ್ಪಾಡುಗಳನ್ನು ಮಾಡಲಾಗಿದೆ. ಈ ರೀತಿ ನಿರ್ಧಾರ ಮಾಡುವಾಗ ಸಚಿವ ಸಂಪುಟವು ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದ ತೀರ್ಪಿನಲ್ಲಿ ನಮೂದಿಸಲಾದ ತತ್ವಗಳನ್ನು ಗಮನದಲ್ಲಿಟ್ಟುಕೊಂಡಿದೆ.

6)​ಪರಿಶಿಷ್ಟ ಜಾತಿಗಳಲ್ಲಿನ ಚಲನಶೀಲತೆಯನ್ನು ಹಾಗೂ ಲಭ್ಯವಾಗುವ ದತ್ತಾಂಶಗಳನ್ನು ಪರಿಶೀಲಿಸಿಕೊಂಡು, ಕಾಲಕಾಲಕ್ಕೆ ಈ ಜಾತಿಗಳನ್ನು ಅಧ್ಯಯನ ಮಾಡಿ ವರದಿ ನೀಡಲು ಶಾಶ್ವತ ಪರಿಶಿಷ್ಟ ಜಾತಿಗಳ ಆಯೋಗವನ್ನು ರಚಿಸಲು ತೀರ್ಮಾನಿಸಿದ್ದೇವೆ.

7)​ಒಳ ಮೀಸಲಾತಿಯ ಕುರಿತಂತೆ ಆದೇಶ ಹೊರಡಿಸಿದ ಕೂಡಲೇ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಹಾಗೂ ಒಂದು ಬಾರಿಗೆ ವಯೋಮಿತಿ ಸಡಿಲಿಸಲು ತೀರ್ಮಾನಿಸಿದ್ದೇವೆ.

8)​ ಇದೇ ಸಂದರ್ಭದಲ್ಲಿ ಒಳ ಮೀಸಲಾತಿ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ತೀರ್ಮಾನಿಸಿದ್ದೇವೆ.

9)​ಸರ್ಕಾರವು ಈಗ ಕೈಗೊಂಡಿರುವ ತೀರ್ಮಾನದಲ್ಲಿ ಯಾವುದಾದರೂ ಮಾರ್ಪಾಡುಗಳ ಅಗತ್ಯತೆ ಕಂಡುಬ0ದರೆ ಅವುಗಳನ್ನು ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿನ ಅಂಕಿ-ಅ0ಶಗಳನ್ನು ಆಧರಿಸಿ ಬದಲಾವಣೆಗೆ ಒಳಪಡಿಸುವ ಷರತ್ತಿಗೆ ಬದ್ಧವಾಗಿದೆ. ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರ ವರದಿಯನ್ನು ಮೇಲೆ ಪ್ರಸ್ತಾಪಿಸಿದ ಮಾರ್ಪಾಟುಗಳೊಂದಿಗೆ ಅಂಗೀಕರಿಸಿದೆ ಎಂಬ ಅಂಶಗಳನ್ನು ಸದನದ ಮುಂದೆ ಮಂಡಿಸಲು ಸರ್ಕಾರವು ಸಂತೋಷ ಪಡುತ್ತದೆ. ನಮ್ಮ ಈ ತೀರ್ಮಾನವು ಒಳ ಮೀಸಲಾತಿ ಕುರಿತ ದಶಕಗಳ ಹೋರಾಟಕ್ಕೆ ನ್ಯಾಯ ಕಲ್ಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಭಾವಿಸಿದ್ದೇವೆ. ಅಭಿವೃದ್ಧಿಶೀಲ ರಾಜ್ಯವಾದ ಕರ್ನಾಟಕವು ಸಾಮಾಜಿಕ ನ್ಯಾಯದ ವಿಚಾರದಲ್ಲೂ ಮುಂಚೂಣಿಯಲ್ಲಿದೆ ಎಂಬುದನ್ನು ನಮ್ಮ ಸರ್ಕಾರವು ಸಾಬೀತು ಮಾಡಿದೆ.

BREAKING: ಒಳ ಮೀಸಲಾತಿ ಹೋರಾಟದ ಮೊಕದ್ದಮೆ ಹಿಂಪಡೆಯಲು ಸರ್ಕಾರ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ

Share. Facebook Twitter LinkedIn WhatsApp Email

Related Posts

BREAKING: ಎಡಗೈಗೆ 6%, ಬಲ ಸಮುದಾಯಕ್ಕೆ 6%, ಸ್ಪೃಶ್ಯ ಸಮುದಾಯಕ್ಕೆ 5% ಮೀಸಲಾತಿ: ಸಿಎಂ ಸಿದ್ಧರಾಮಯ್ಯ ಘೋಷಣೆ

20/08/2025 4:24 PM3 Mins Read

BREAKING: ಒಳ ಮೀಸಲಾತಿ ಹೋರಾಟದ ಮೊಕದ್ದಮೆ ಹಿಂಪಡೆಯಲು ಸರ್ಕಾರ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

20/08/2025 4:16 PM1 Min Read

BREAKING: ವಿಧಾನ ಪರಿಷತ್ತಿನಲ್ಲಿ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ’ ಅಂಗೀಕಾರ

20/08/2025 3:56 PM1 Min Read
Recent News

BREAKING: ಎಡಗೈಗೆ 6%, ಬಲ ಸಮುದಾಯಕ್ಕೆ 6%, ಸ್ಪೃಶ್ಯ ಸಮುದಾಯಕ್ಕೆ 5% ಮೀಸಲಾತಿ: ಸಿಎಂ ಸಿದ್ಧರಾಮಯ್ಯ ಘೋಷಣೆ

20/08/2025 4:24 PM

‘SC ಒಳಮೀಸಲಾತಿ’ ವಿಚಾರ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಮಾತಿನ ಹೈಲೈಟ್ಸ್

20/08/2025 4:19 PM

BREAKING: ಒಳ ಮೀಸಲಾತಿ ಹೋರಾಟದ ಮೊಕದ್ದಮೆ ಹಿಂಪಡೆಯಲು ಸರ್ಕಾರ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

20/08/2025 4:16 PM

BIGG NEWS : ಕ್ರಿಮಿನಲ್ ಪ್ರಕರಣಗಳಲ್ಲಿ ಪಿಎಂ, ಸಿಎಂ & ಸಚಿವರ ಪದಚ್ಯುತಗೊಳಿಸುವ ಮಸೂದೆ ‘ಜೆಪಿಸಿ’ಗೆ ರವಾನೆ

20/08/2025 4:13 PM
State News
KARNATAKA

BREAKING: ಎಡಗೈಗೆ 6%, ಬಲ ಸಮುದಾಯಕ್ಕೆ 6%, ಸ್ಪೃಶ್ಯ ಸಮುದಾಯಕ್ಕೆ 5% ಮೀಸಲಾತಿ: ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0920/08/2025 4:24 PM KARNATAKA 3 Mins Read

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಗಳ ಎಡಗೈ ಸಮುದಾಯಕ್ಕೆ ಶೇ.6ರಷ್ಟು, ಬಲ ಸಮುದಾಯಕ್ಕೆ ಶೇ.6ರಷಅಟು ಸ್ಪೃಶ್ಯ ಸಮುದಾಯಕ್ಕೆ ಶೇ.5ರಷ್ಟು ಒಳ ಮೀಸಲಾತಿ…

‘SC ಒಳಮೀಸಲಾತಿ’ ವಿಚಾರ: ಹೀಗಿದೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಮಾತಿನ ಹೈಲೈಟ್ಸ್

20/08/2025 4:19 PM

BREAKING: ಒಳ ಮೀಸಲಾತಿ ಹೋರಾಟದ ಮೊಕದ್ದಮೆ ಹಿಂಪಡೆಯಲು ಸರ್ಕಾರ ತೀರ್ಮಾನ: ಸಿಎಂ ಸಿದ್ಧರಾಮಯ್ಯ ಘೋಷಣೆ

20/08/2025 4:16 PM

BREAKING: ವಿಧಾನ ಪರಿಷತ್ತಿನಲ್ಲಿ ‘ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ’ ಅಂಗೀಕಾರ

20/08/2025 3:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.