ಬೆಂಗಳೂರು: ಧರ್ಮಸ್ಥಳದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ ಎಂಬುದಾಗಿ ಯೂಟ್ಯೂಬರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಡಿಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.
ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದಾಗಿ ಆರೋಪಿಸಿ ಯೂಟ್ಯೂಬರ್ ವಿರುದ್ಧ ಇಡಿಗೆ ಹಿಂದೂ ಮುಖಂಡ ತೇಜಸ್ ಗೌಡ ಎಂಬುವರು ದೂರು ನೀಡಿದ್ದಾರೆ.
ಮುಸ್ಲೀಂ ಯೂಟ್ಯೂಬರ್ ಮತ್ತು ಅಸೋಸಿಯೇಟ್ಸ್ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಹಾನಿ ಮಾಡುತ್ತಿದ್ದಾನೆ. ಧರ್ಮಸ್ಥಳ ಮಂದಿರದ ಹೆಸರು ಕೆಡಿಸಲು ಪ್ರಯತ್ನ ನಡೆಯುತ್ತಿದೆ ಎಂಬುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.
ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕಾಗಿ ಇವರಿಗೆಲ್ಲ ಹೊರದೇಶದಿಂದ ಹಣ ಬರುತ್ತಿದೆ. ಹೀಗಾಗಿ ಈ ಪ್ರಕರಣ ಗಂಭೀರವಾಗಿ ಪರಿಗಣಿಸಬೇಕು ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಹಿಂದೆ ದೊಡ್ಡ ಗುಂಪಿದೆ. ಅವರ ಕೈವಾಡದಿಂದ ಅಪಪ್ರಚಾರ ಸೇರಿದಂತೆ ಎಲ್ಲವೂ ನಡೆಯುತ್ತಿದೆ ಎಂಬುದಾಗಿ ಹೇಳಲಾಗಿದೆ.
BREAKING: ಎಡಗೈಗೆ 6%, ಬಲ ಸಮುದಾಯಕ್ಕೆ 6%, ಸ್ಪೃಶ್ಯ ಸಮುದಾಯಕ್ಕೆ 5% ಮೀಸಲಾತಿ: ಸಿಎಂ ಸಿದ್ಧರಾಮಯ್ಯ ಘೋಷಣೆ
ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ
ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ