ಮಧ್ಯಪ್ರದೇಶದ ನರಸಿಂಗ್ಪುರ ಜಿಲ್ಲೆಯಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ, ವಿದ್ಯಾರ್ಥಿಯೊಬ್ಬ ಶಾಲಾ ಶಿಕ್ಷಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಆರೋಪಿ ಸೂರ್ಯಂಶ್ ಕೋರ್ಚ ಎಕ್ಸಲೆನ್ಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದು, ಈ ಹಿಂದೆ ವ್ಯಾಸಂಗ ಮಾಡುತ್ತಿದ್ದ ಶಾಲೆಯಲ್ಲಿ, ಸ್ವಾತಂತ್ರ್ಯ ದಿನಾಚರಣೆಯಂದು ಅತಿಥಿ ಶಿಕ್ಷಕಿ ಸೀರೆ ಉಟ್ಟಿದ್ದಕ್ಕೆ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದ, ಆ ಬಗ್ಗೆ ಶಿಕ್ಷಕಿ ದೂರು ನೀಡಿದ್ದರಿಂದ ಕುಪಿತಗೊಂಡ ವಿದ್ಯಾರ್ಥಿ, ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಇದರಿಂದ ಆಕೆಗೆ ಶೇ.25ರಷ್ಟು ಸುಟ್ಟ ಗಾಯಗಳಾಗಿವೆ. ಸದ್ಯ ಆಕೆಯ ಆರೋಗ್ಯ ಸ್ಥಿರವಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರು ಆರೋಪಿ ವಿದ್ಯಾರ್ಥಿಯನ್ನು ಬಂಧಿಸಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಸ್ತುತ, ಆರೋಪಿ ಸೂರ್ಯಾಂಶ್ ಕೊಚಾರ್ ಕಲ್ಯಾಣಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ. ಇದಕ್ಕೂ ಮೊದಲು, ಆರೋಪಿ ಸೂರ್ಯಾಂಶ್ ಕೊಚಾರ್ ನರಸಿಂಗ್‌ಪುರದ ಉತ್ಕೃಷ್ಟ ವಿದ್ಯಾಲಯದಲ್ಲಿ ಓದಿದ್ದ. ಕೆಲವು ಕಾರಣಗಳಿಂದಾಗಿ, ಶಾಲೆಯ ಪ್ರಾಂಶುಪಾಲರು ಅವನನ್ನು ಶಾಲೆಯಿಂದ ಹೊರಹಾಕಿದರು. ನಂತರ, ಸೂರ್ಯಾಂಶ್ ಕುಟುಂಬವು ಅವನನ್ನು ತಮ್ಮದೇ ಗ್ರಾಮದ ಸರ್ಕಾರಿ ಶಾಲೆಗೆ ಸೇರಿಸಿತು