Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳ ನಡುವೆ ಡಿಕ್ಕಿ!

03/02/2026 10:17 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾ, ಢಾಕಾದಲ್ಲಿ ಕಂಪಿಸಿದ ಭೂಮಿ |Earthquake

03/02/2026 9:44 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾದಲ್ಲೂ ಕಂಪಿಸಿದ ಭೂಮಿ! Earthquake

03/02/2026 9:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಒಳಮೀಸಲಾತಿ’ ಆದೇಶ ಹೊರಬಿದ್ದ ಬಳಿಕ ಎಲ್ಲಾ ನೇಮಕಾತಿ ಪ್ರಕ್ರಿಯೆ ಆರಂಭ.!
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಒಳಮೀಸಲಾತಿ’ ಆದೇಶ ಹೊರಬಿದ್ದ ಬಳಿಕ ಎಲ್ಲಾ ನೇಮಕಾತಿ ಪ್ರಕ್ರಿಯೆ ಆರಂಭ.!

By kannadanewsnow5722/08/2025 6:11 AM

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಒಳ ಮೀಸಲಾತಿಯ ಆದೇಶ ಹೊರಬಿದ್ದ ನಂತರ ಎಲ್ಲಾ ನೇಮಕಾತಿ ಪ್ರಕ್ರಿಯೆಗಳು ಪ್ರಾರಂಭಗೊಳಲಿದ್ದು, ಒಂದು ಬಾರಿಗೆ ವಯೋಮಿತಿ ಸಡಿಲಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಕಟಿಬದ್ಧವಾಗಿದ್ದು ಈ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ನಲ್ಲಿ ತಿಳಿಸಿದರು.

ಒಳಮೀಸಲಾತಿ ಕುರಿತು ವಿಧಾನ ಪರಿಷತ್ನಲ್ಲಿ ಉತ್ತರಿಸಿದ ಮುಖ್ಯಮಂತ್ರಿಗಳು

ಮಾನ್ಯ ಸರ್ವೋಚ್ಛ ನ್ಯಾಯಾಲಯವು 2024ರಲ್ಲಿ ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ ನೀಡಲಾದ ತೀರ್ಪಿನಲ್ಲಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರವಿದ್ದು, ಸಂವಿಧಾನದ ಅನುಚ್ಚೇದ 14, 15 ಮತ್ತು 16 ರ ಮೂಲ ಆಶಯವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಒಳ ಮೀಸಲಾತಿ ವ್ಯವಸ್ಥೆ ಕಲ್ಪಿಸಬಹುದು ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ, ಸರ್ಕಾರವು 12.11.2024 ರ ಆದೇಶದಂತೆ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರ ಏಕ ಸದಸ್ಯ ಆಯೋಗವನ್ನು ರಚಿಸಲಾಗಿತ್ತು. ಸೂಕ್ತ ದತ್ತಾಂಶಗಳನ್ನು ಸಂಗ್ರಹಿಸಿ ಒಳ ಮೀಸಲಾತಿ ನೀಡುವ ಕುರಿತು ಶಿಫಾರಸ್ಸುಗಳನ್ನು ಮಾಡುವಂತೆ ಆಯೋಗವನ್ನು ಕೋರಲಾಗಿತ್ತು.

ಆಯೋಗವು ರಾಜ್ಯದ 101 ಪರಿಶಿಷ್ಟ ಜಾತಿಗಳ ಸಮಗ್ರ ಅಧ್ಯಯನ ನಡೆಸಿ 1,05,09,871 ಜನರ ದತ್ತಾಂಶಗಳನ್ನು ಸಂಗ್ರಹಿದ್ದು ಶೇ.93 ರಷ್ಟು ಪರಿಶಿಷ್ಟ ಜಾತಿಗಳ ಜನಸಂಖ್ಯೆ ಈ ಸಮೀಕ್ಷೆಯ ಭಾಗವಾಗಿದೆ. ಅಂತಿಮವಾಗಿ ಆಯೋಗವು ಇದೇ ಆಗಸ್ಟ್ 1 ರಂದು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು ಎಂದರು

ಆಯೋಗದ ಶಿಫಾರಸ್ಸುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಕೆಲವು ಮಾರ್ಪಾಡುಗಳೊಂದಿಗೆ ಇದೇ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ ಎಂದರು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಒಪ್ಪಿಗೆ ನೀಡಿದೆ. ಎಡಗೈ ಸಂಬಂಧಿತ ಜಾತಿಗಳುಳ್ಳ ಎ ಪ್ರವರ್ಗಕ್ಕೆ – ಶೇ. 6, ಬಲಗೈ ಸಂಬ0ಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ. 6 ಹಾಗೂ ಸ್ಪೃಶ್ಯ ಜಾತಿಗಳುಳ್ಳ ಸಿ ಪ್ರವರ್ಗಕ್ಕೆ – ಶೇ.5 ರಷ್ಟು ಒಳಮೀಸಲಾತಿ ನೀಡಲು ಸರ್ಕಾರ ತೀರ್ಮಾನಿಸಿದೆ.

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಹಾಗೂ ಇನ್ನಿತರ ಅವಕಾಶಗಳನ್ನು ಸಮಾನವಾಗಿ ಹಂಚುವ ಆಶಯದೊಂದಿಗೆ, ಮಾನ್ಯ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಗಮನದಲ್ಲಿಟ್ಟುಕೊಂಡು, ಕೆಲ ಮಾರ್ಪಾಡುಗಳೊಂದಿಗೆ ಒಳಮೀಸಲಾತಿ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಶಾಶ್ವತ ಪರಿಶಿಷ್ಟ ಜಾತಿ ಆಯೋಗದ ರಚನೆ ಸೇರಿದಂತೆ ಒಳಮೀಸಲಾತಿ ಹೋರಾಟಗಾರರ ಮೇಲಿನ ಎಲ್ಲ ಮೊಕದ್ದಮೆಗಳನ್ನು ಹಿಂಪಡೆಯಲಾಗುವುದೆಂದು ತಿಳಿಸಿದರು.

ಒಳ ಮೀಸಲಾತಿಯ ಆದೇಶ ಹೊರಬಿದ್ದ ನಂತರ ಎಲ್ಲಾ ನೇಮಕಾತಿ ಪ್ರಕ್ರಿಯೆಗಳು ಪ್ರಾರಂಭಗೊಳಲಿದ್ದು, ಒಂದು ಬಾರಿಗೆ ವಯೋಮಿತಿ ಸಡಿಲಿಕೆ ಮಾಡಲಾಗುವುದು ಎಂದರು.

ಒಳಮೀಸಲಾತಿಗಾಗಿ ದಶಕಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ನಮ್ಮ ಸರ್ಕಾರ ನ್ಯಾಯಯುತವಾಗಿ ಸ್ಪಂದಿಸಿದೆ. ನಮ್ಮ ರಾಜ್ಯವು ಅಭಿವೃದ್ಧಿಯ ಜೊತೆಜೊತೆಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ನಿಟ್ಟಿನಲ್ಲೂ ಮುಂಚೂಣಿಯಲ್ಲಿದೆ ಎಂದವರು ತಿಳಿಸಿದರು.

* ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ 'ಎ' ಪ್ರವರ್ಗಕ್ಕೆ – ಶೇ. 6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ. 6 ಹಾಗೂ ಸಿ ಪ್ರವರ್ಗಕ್ಕೆ… pic.twitter.com/KIbpRRrRlS

— Siddaramaiah (@siddaramaiah) August 20, 2025

ಆಗಸ್ಟ್ 19 ರಂದು ನಡೆದ ಸಚಿವ ಸಂಪುಟದಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ಆಯೋಗವು ಸಲ್ಲಿಸಿದ್ದ ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿದ್ದೇವೆ.

* ಎಡಗೈ ಸಂಬಂಧಿತ ಜಾತಿಗಳೆಂದು ಆಯೋಗವು ಗುರುತಿಸಿರುವ ಸಮುದಾಯಗಳಿಗೆ ಶೇ.6 ರಷ್ಟು ಒಳಮೀಸಲಾತಿ ಕಲ್ಪಿಸಲು ತೀರ್ಮಾನಿಸಿದ್ದೇವೆ.

*ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಪರಯ,… pic.twitter.com/cYxbEmIdvn

— Siddaramaiah (@siddaramaiah) August 20, 2025

* ಜಸ್ಟೀಸ್ ನಾಗಮೋಹನ್ ದಾಸ್ ಆಯೋಗವು ಎ,ಬಿ,ಸಿ,ಡಿ,ಇ ಎಂದು ಪ್ರವರ್ಗಗಳನ್ನಾಗಿ ವಿಭಾಗೀಕರಿಸಿ ಮಾಡಿದ್ದ ಶಿಫಾರಸ್ಸನ್ನು ಸಚಿವ ಸಂಪುಟವು ಎ,ಬಿ,ಸಿ ಎಂದು ಮೂರು ಪ್ರವರ್ಗಗಳನ್ನಾಗಿ ವಿಭಾಗೀಕರಿಸಲು ಹಾಗೂ ಎಡಗೈ ಸಂಬಂಧಿತ ಜಾತಿಗಳುಳ್ಳ 'ಎ' ಪ್ರವರ್ಗಕ್ಕೆ – ಶೇ. 6, ಬಲಗೈ ಸಂಬಂಧಿತ ಜಾತಿಗಳುಳ್ಳ ಬಿ ಪ್ರವರ್ಗಕ್ಕೆ – ಶೇ. 6 ಹಾಗೂ ಸಿ ಪ್ರವರ್ಗಕ್ಕೆ… pic.twitter.com/KIbpRRrRlS

— Siddaramaiah (@siddaramaiah) August 20, 2025

ಆಗಸ್ಟ್ 19 ರಂದು ನಡೆದ ಸಚಿವ ಸಂಪುಟದಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಅವರ ಆಯೋಗವು ಸಲ್ಲಿಸಿದ್ದ ಶಿಫಾರಸ್ಸುಗಳನ್ನು ಕೆಲವು ಮಾರ್ಪಾಟುಗಳೊಂದಿಗೆ ಅಂಗೀಕರಿಸಿ, ಎಡಗೈ ಸಂಬಂಧಿತ ಜಾತಿಗಳುಳ್ಳ 'ಎ' ಪ್ರವರ್ಗಕ್ಕೆ – ಶೇ. 6, ಬಲಗೈ ಸಂಬಂಧಿತ ಜಾತಿಗಳುಳ್ಳ 'ಬಿ' ಪ್ರವರ್ಗಕ್ಕೆ – ಶೇ. 6 ಹಾಗೂ 'ಸಿ' ಪ್ರವರ್ಗಕ್ಕೆ – ಶೇ.5 ರಷ್ಟು ಒಳಮೀಸಲಾತಿ ನೀಡಲು… pic.twitter.com/HvFy1zvJnf

— Siddaramaiah (@siddaramaiah) August 20, 2025

Good news for job seekers: All recruitment processes have begun as soon as the 'internal reservation' order is issued!
Share. Facebook Twitter LinkedIn WhatsApp Email

Related Posts

BIG NEWS : ರಸ್ತೆ ಬದಿಯ ಅಂಗಡಿಗಳಲ್ಲಿ ಗೋಬಿ, ಪಾನಿಪೂರಿಯಲ್ಲಿ `ಕೃತಕ ಬಣ್ಣ ಬಳಕೆ’ ನಿಷೇಧ : ಸರ್ಕಾರ ಮಹತ್ವದ ಆದೇಶ

03/02/2026 9:19 PM2 Mins Read

BREAKING : ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹ : ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ.!

03/02/2026 9:03 PM1 Min Read

ಕರ್ನಾಟಕ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಪಟ್ಟಿ ಇಲ್ಲಿದೆ

03/02/2026 8:42 PM3 Mins Read
Recent News

BREAKING : ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳ ನಡುವೆ ಡಿಕ್ಕಿ!

03/02/2026 10:17 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾ, ಢಾಕಾದಲ್ಲಿ ಕಂಪಿಸಿದ ಭೂಮಿ |Earthquake

03/02/2026 9:44 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾದಲ್ಲೂ ಕಂಪಿಸಿದ ಭೂಮಿ! Earthquake

03/02/2026 9:37 PM

Good News ; PF ಖಾತೆ ಹೊಂದಿರುವವರಿಗೆ ಕೇಂದ್ರ ಸರ್ಕಾರದ ಸಿಹಿ ಸುದ್ದಿ ; ಈಗ 8 ದಿನಗಳಲ್ಲಿ ಖಾತೆಗೆ ಹಣ ಜಮಾ!

03/02/2026 9:31 PM
State News
KARNATAKA

BIG NEWS : ರಸ್ತೆ ಬದಿಯ ಅಂಗಡಿಗಳಲ್ಲಿ ಗೋಬಿ, ಪಾನಿಪೂರಿಯಲ್ಲಿ `ಕೃತಕ ಬಣ್ಣ ಬಳಕೆ’ ನಿಷೇಧ : ಸರ್ಕಾರ ಮಹತ್ವದ ಆದೇಶ

By kannadanewsnow5703/02/2026 9:19 PM KARNATAKA 2 Mins Read

ರಸ್ತೆ ಬದಿ ದೊರೆಯುವ ಗೋಬಿ ಮಂಚೂರಿ, ಪಾನಿಪೂರಿ ಮುಂತದಾ ಚಾಟ್ಸ್ಗಳಲ್ಲಿ ಕೃತಕ ಬಣ್ಣ ಹಾಗೂ ನಿಷೇಧಿತ ವಸ್ತುಗಳನ್ನು ಬೆರೆಸದಂತೆ ಸರ್ಕಾರ…

BREAKING : ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹ : ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ.!

03/02/2026 9:03 PM

ಕರ್ನಾಟಕ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಪಟ್ಟಿ ಇಲ್ಲಿದೆ

03/02/2026 8:42 PM

BREAKING : ಗದಗದಲ್ಲಿ ಘೋರ ದುರಂತ : ಮನೆಗೋಡೆ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು.!

03/02/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.