ಉಡುಪಿ: ಬಿ ಎಲ್ ಸಂತೋಷ್ ವಿರುದ್ಧದ ಅವಹೇಳನಕಾರಿ ಹೇಳಿಕೆ ಆರೋಪಕ್ಕೆ ಸಂಬಂಧಪಟ್ಟಂತೆ ಹ್ಮಾವರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕ್ರಮ ಕೈಗೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗದ ಕಾರಣ ಉಜಿರೆಯ ಮನೆಯಿಂದ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈ ನಡುವೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಗೆ ) ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಕೋರ್ಟ್ ಆದೇಶದ ಹಿನ್ನೆಲೆ ಮಹೇಶ್ ತಿಮರೋಡಿ ಈಗ ಹಿರಿಯಡ್ಕ ಸಬ್ ಜೈಲು ನಲ್ಲಿದ್ದಾರೆ. ನಾಳೆ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಡೆಸಲಿದೆ ಅಂತ ತಿಳಿದು ಬಂದಿದೆ. ನಿನ್ನ ಅವರ ರಕ್ತದೊತ್ತಡ ಹೆಚ್ಚಿತ್ತು ಎನ್ನಲಾಗಿದೆ.