ಬೆಂಗಳೂರು: ನಗರದಲ್ಲಿ ಸರ ಅಪರಹಣ ಮಾಡಿದ ಮೂವರು ಸರಗಳ್ಳರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 57.28 ಗ್ರಾಂನ ಒಂದು ಚಿನ್ನದ ಮಾಂಗಲ್ಯ ಸರ ವಶಕ್ಕೆ ಪಡೆಯಲಾಗಿದೆ. ಅದರ ಮೌಲ್ಯ 15.70 ಲಕ್ಷ ಆಗಿದೆ.
ಬೆಂಗಳೂರು ನಗರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಾಣಸವಾಡಿ ಪೊಲೀಸ್ ಠಾಣಾ ಸರಹದ್ದಿನ, ಹೆಚ್.ಆರ್.ಬಿ.ಆರ್ ಲೇಔಟ್, ಕಲ್ಯಾಣ ನಗರದಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:13/07/2025 ರಂದು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ದಿನಾಂಕ:12/07/2025 ರಂದು ರಾತ್ರಿ ಹೆಚ್.ಆರ್.ಬಿ.ಆರ್ ಲೇಔಟ್ ನ 8ನೇ ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ್ಗೆ, ದ್ವಿ-ಚಕ್ರ ವಾಹನದಲ್ಲಿ ಹಿಂಬದಿಯಿಂದ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಪಿದ್ಯಾದುದಾರರ ಕತ್ತಿನಲ್ಲಿದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತಕೊಂಡು ದ್ವಿ-ಚಕ್ರ ವಾಹನದಲ್ಲಿ ಪರಾರಿಯಾಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಸರ ಅಪಹರಣ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಭಾತ್ಮೀದಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:19/07/2025 ರಂದು ಬೆಳಿಗ್ಗೆ ಮಾರತಹಳ್ಳಿಯ ರಾಮಂಜನೇಯ ಲೇಔಟ್‌ನ ಪಿ.ಜಿಯೊಂದರ ಮುಂಭಾಗ ಮೂವರು ವ್ಯಕ್ತಿಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ಮೂವರು ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಸರ ಅಪಹರಣ ಮಾಡಿರುವುದಾಗಿ ತನ್ನೊಪ್ಪಿಕೊಂಡಿರುತ್ತಾರೆ.
ಅದೇ ದಿನ ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 10 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು. ಪೊಲೀಸ್ ಅಭಿರಕ್ಷೆಗೆ ಪಡೆದ ಮೂವರು ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿ, ಪ್ರಕರಣದಲ್ಲಿ ಸರ ಅಪಹರಣ ಮಾಡಿದ್ದ ಚಿನ್ನದ ಮಾಂಗಲ್ಯ ಸರವನ್ನು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿತನೊರ್ವನ ತಾಯಿಯ ಕಡೆಯಿಂದ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿರುವ ಮುತ್ತೊಟ್ ಫೈನಾನ್ಸ್‌ನಲ್ಲಿ ಅಡಮಾನವಿಟ್ಟಿರುವುದಾಗಿ ತಿಳಿಸಿರುತ್ತಾರೆ.
ದಿನಾಂಕ:21/07/2025 ರಂದು ಮುತ್ತೊಟ್ ಫೈನಾನ್ಸ್‌ನಲ್ಲಿ ಅಡಮಾನವಿಟ್ಟಿದ್ದ 57.28 ಗ್ರಾಂ ಚಿನ್ನದ ಮಾಂಗಲ್ಯ ಸರ ಹಾಗೂ ದಿನಾಂಕ:22/07/2025 ರಂದು ಕೃತ್ಯಕ್ಕೆ ಬಳಸಲು ಮಾರತಹಳ್ಳಿಯಲ್ಲಿರುವ ಪ್ರೀಟೋ ಸ್ಕೂಟಿ & ಬೈಕ್ ರೆಂಟಲ್ಸ್‌ನಿಂದ ಬಾಡಿಗೆಗೆ ಪಡೆದಿದ್ದ 1 ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಒಟ್ಟು ಮೌಲ್ಯ * 5,70,000/-(ಐದು ಲಕ್ಷದ ಎಪ್ಪತ್ತು ಸಾವಿರ ರೂಪಾಯಿ).
ದಿನಾಂಕ:24/07/2025 ರಂದು ಮೂವರು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ.
ಈ ಕಾರಾಚರಣೆಯನ್ನು ಪೂರ್ವ ವಿಭಾಗದ ಉಪ-ಪೊಲೀಸ್ ಕಮೀಷನರ್ ದೇವರಾಜ್, ಐ.ಪಿ.ಎಸ್.ರವರ ಮಾರ್ಗದರ್ಶನದಲ್ಲಿ ಬಾಣಸವಾಡಿ ಉಪ ವಿಭಾಗದ ಸಹಾಯಕ ಪೊಲೀಸ್ ಕಮೀಷನರ್, ಉಮಾಶಂಕರ್.ಎಂ.ಹೆಚ್. ರವರ ನೇತೃತ್ವದಲ್ಲಿ ಬಾಣಸವಾಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಬೆಂಗಳೂರಲ್ಲಿ ದ್ವಿ-ಚಕ್ರ ವಾಹನ ಕದಿಯುತ್ತಿದ್ದ ಓರ್ವ ಕಳ್ಳ ಅರೆಸ್ಟ್, 16 ಲಕ್ಷ ಮೌಲ್ಯದ 8 ಬೈಕ್ ಜಪ್ತಿ