ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಮನೆ ಮೇಲೆ ದಾಳಿ ನಡೆಸಿದ್ದರು. ಈ ಬೆನ್ನಲ್ಲೇ ಅವರನ್ನು ಸಿಕ್ಕಿಂನಲ್ಲಿ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಗೇಮಿಂಗ್ ಆಪ್ ಗಳಿಂದ ತನ್ನ ಒಡೆತನದ ಕಂಪನಿಗಳಿಂದ ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಮತ್ತು ತೆರಿಗೆ ವಂಚನೆ ಆರೋಪವು ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ಕೇಳಿ ಬಂದಿತ್ತು. ಇಂದು ಬೆಳ್ಳಂಬೆಳಗ್ಗೆ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.
ಶಾಸಕ ವೀರೇಂದ್ರ ಪಪ್ಪಿ, ಸಹೋದರ ಕೆಸಿ ನಾಗರಾಜ, ಕೆಸಿ ತಿಪ್ಪೇಸ್ವಾಮಿ ಮನೆಯ ಮೇಲೆಯೂ ದಾಳಿ ನಡೆಸಿದ್ದರು. ಬೆಂಗಳೂರು, ಚಿತ್ರದುರ್ಗ, ಚಳ್ಳಕೆರೆ, ಗೋಪಾ ಸೇರಿದಂತೆ ಒಟ್ಟು 17 ಕಡೆಗಳಲ್ಲಿ ಏಕಕಾಲಕ್ಕೆ ದಾಳಿಯನ್ನು ಇಡಿ ಅಧಿಕಾರಿಗಳು ನಡೆಸಿದ್ದರು. ದಾಖಲೆಯ ಪರಿಶೀಲನೆ ನಂತ್ರ ಅಕ್ರಮ ಹಣ ವರ್ಗಾವಣೆ ಮಾಡಿರೋದು ಬೆಳಕಿಗೆ ಬಂದಿದೆ. ಹೀಗಾಗಿ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಸಿಕ್ಕಂನಲ್ಲಿ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Watch Video: ದೆಹಲಿ ಸಿಎಂ ರೇಖಾ ಗುಪ್ತ ಕಾರ್ಯಕ್ರಮದಲ್ಲಿ ಘೋಷಣೆ ಕೂಗಿ ಗದ್ದಲ, ಇಬ್ಬರು ಅರೆಸ್ಟ್
ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಸುದ್ದಿ : ಬ್ಯಾಂಕಿಂಗ್, ಹಣಕಾಸು ಕ್ಷೇತ್ರದಲ್ಲಿ 2.5 ಲಕ್ಷ ಹೊಸ ಉದ್ಯೋಗಗಳು ಲಭ್ಯ