ಬೆಂಗಳೂರು: ನಗರದ ಸಿಟಿ ಸಿವಿಲ್ ಕೋರ್ಟ್ ಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಲಾಗಿದೆ. ಹೀಗಾಗಿ ಸ್ಥಳದಲ್ಲಿ ಆತಂಕ ಉಂಟಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ನ್ಯಾಯಾಲಯದ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಇ-ಮೇಲ್ ಕಳುಹಿಸಲಾಗಿದೆ.
ಈ ವಿಷಯ ತಿಳಿದು ಸ್ಥಳಕ್ಕೆ ಶ್ವಾನದಳ, ಬಾಂಬ್ ನಿಷ್ಕ್ರೀಯ ದಳವು ಆಗಮಿಸಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಬಾಂಬ್ ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯಲ್ಲಿ ಬದಲಾವಣೆಗಳಿಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ
ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಸುದ್ದಿ : ಬ್ಯಾಂಕಿಂಗ್, ಹಣಕಾಸು ಕ್ಷೇತ್ರದಲ್ಲಿ 2.5 ಲಕ್ಷ ಹೊಸ ಉದ್ಯೋಗಗಳು ಲಭ್ಯ