ಕಲಬುರ್ಗಿ: ಜಿಲ್ಲೆಯಲ್ಲಿ ಪಾಠ ಕೇಳುತ್ತಿದ್ದಾಗಲೇ ಶಾಲಾ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವಂತ ಘಟನೆ ನಡೆದಿದೆ.
ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಲ್ಕಪಲ್ಲಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿತಗೊಂಡಿದೆ. ಈ ವೇಳೆ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದರಿಂದಾಗಿ ಮೂವರು ಗಾಯಗೊಂಡಿದ್ದಾರೆ.
ಶಾಲಾ ಮೇಲ್ಛಾವಣಿ ಕುಸಿತಗೊಂಡ ಪರಿಣಾಮ ಶ್ರೀನಿವಾಸ್, ಕಾವೇರಿ, ಅಕ್ಷತಾ ಎಂಬಂತ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಅದೃಷ್ಟ ವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡಿರುವಂತ ಇಬ್ಬರು ವಿದ್ಯಾರ್ಥಿಗಳನ್ನು ಗುರುಮಠಕಲ್ ತಾಲ್ಲೂಕು ಆಸ್ಪತ್ರೆಗೆ, ಮತ್ತೋರ್ವ ವಿದ್ಯಾರ್ಥಿಯನ್ನು ಕಲಬುರ್ಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಅಕ್ರಮ ಗಣಿಗಾರಿಕೆ ವರದಿಗೆ ಸಚಿವ ಸಂಪುಟ ಅನುಮೋದನೆ: ವರದಿಯಲ್ಲಿ ಏನಿದೆ ಗೊತ್ತಾ?
ಉದ್ಯೋಗಾಕಾಂಕ್ಷಿಗಳಿಗೆ ಬಂಪರ್ ಸುದ್ದಿ : ಬ್ಯಾಂಕಿಂಗ್, ಹಣಕಾಸು ಕ್ಷೇತ್ರದಲ್ಲಿ 2.5 ಲಕ್ಷ ಹೊಸ ಉದ್ಯೋಗಗಳು ಲಭ್ಯ