ಬೆಂಗಳೂರು : ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಆದರೆ ನಾನು ಮುಖ್ಯಮಂತ್ರಿ ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸದನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 2028ರಲ್ಲಿ ನಮ್ಮ ಪಕ್ಷವೇ ಮತ್ತೆ ಅಧಿಕಾರಕ್ಕೆಬರುತ್ತದೆ. ಇದು ನೂರಕ್ಕೆ ನೂರ ರಷ್ಟು ಸತ್ಯ. ಆದರೆ, ಮುಂದಿನ ಅವಧಿಗೆ ನಾನು ಮುಖ್ಯ ಮಂತ್ರಿ ಆಗುವುದಿಲ್ಲ. ಇನ್ನು ಜೆಡಿಎಸ್ 2-3 ಸ್ಥಾನ ಬಂದರೆ ಅದೇ ಹೆಚ್ಚು. ಹೀಗಾಗಿ ಜೆಡಿಎಸ್ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡಲಿ ಎಂದು ಹೇಳಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಬಿಜೆಪಿಯಾಗಲಿ, ಜೆಡಿಎಸ್ ಆಗಲಿ, ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಶಾಸಕ ಬಸನಗೌಡ ಯತ್ನಾಳ್ ಅವರಾಗಲಿ ಅಧಿಕಾರಕ್ಕೆ ಬರುವುದಿಲ್ಲ. ಯತ್ನಾಳ್ ಹೊಸ ಪಕ್ಷ ಮಾಡಿದರೆ ಆ ಸಾಧ್ಯತೆ ಇದ್ದರೂ ಇರಬಹುದು ಎಂದು ಹೇಳಿದರು.
ರಾಜ್ಯದಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಸಂಬಂಧ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸ್ಸು ಮಾಡಲು ರಚಿಸಲಾಗಿದ್ದ ಸಚಿವ ಸಂಪುಟದ ಉಪಸಮಿತಿಯ ವರದಿಯನ್ನು ರಾಜ್ಯ ಸಚಿವ ಸಂಪುಟವು ಅನುಮೋದಿಸಿದ್ದು, ವರದಿಯ ಬಗ್ಗೆ ಸದನಕ್ಕೆ ಮಾಹಿತಿ ನೀಡಿದೆ. pic.twitter.com/IKDmiarP95
— Siddaramaiah (@siddaramaiah) August 22, 2025