ಬೆಂಗಳೂರು : ಆಗಸ್ಟ್-2025 ರ ಮಾಹೆಯಲ್ಲಿ ಅಡುಗೆ ಅನಿಲದ ಸಿಲಿಂಡರನ್ನು ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿಸಿದೆ.
ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು. ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದಲ್ಲ. ಸರ್ಕಾರದ ಆದೇಶ ಸಂಖ್ಯೆ FCS 163 Epp 2025 ಬೆಂಗಳೂರು ದಿನಾಂಕ 06-09-2006 ರಲ್ಲಿ ಈ ಕೆಳಗಿನಂತೆ ಗೃಹೋಪಯೋಗಿ ಗ್ಯಾಸ್ ಸಿಲಿಂಡರ್ ಗೆ ನಾಗರಿಕ ತಿದ್ದುಪಡಿಯಲ್ಲಿ ನಿಗಧಿಪಡಿಸಿರುವಂತೆ
1. 5.00 ಕಿ.ಮೀ.ವರೆಗೆ ಉಚಿತ (ಯಾವುದೇ ಶುಲ್ಕವಿಲ್ಲ)
2. 5 ಕಿ.ಮೀ. ಮೀರಿದ ಪ್ರತಿ ರೌಂಡ್ ಟ್ರಿಪ್ ಕಿ.ಮೀ.ಗೆ- ಪ್ರತಿ ಸಿಲಿಂಡರ್ಗೆ ರೂ.1.60 (ರೂ. ಒಂದು ರೂಪಾಯಿ ಅರವತ್ತು ಪೈಸೆ ಮಾತ್ರ)
ಸಿಲಿಂಡರನ್ನು ಮನೆಗೆ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳಿದಲ್ಲಿ, ಜಂಟಿ ನಿರ್ದೇಶಕರ ಕಛೇರಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾರ್ಯಾಲಯಕ್ಕೆ ಹಾಗೂ ಕಛೇರಿಯ ದೂರವಾಣಿ ಸಂಖ್ಯೆ 08172-268229 ಮತ್ತು ಆಯಾ ತಾಲ್ಲೂಕಿನ ತಹಶೀಲ್ದಾರರ ಕಛೇರಿಯ ಆಹಾರ ಶಾಖೆಗೆ ದೂರು ಸಲ್ಲಿಸುವುದು.