ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸುಕುಧಾರಿಯನ್ನ ವಿಶೇಷ ತನಿಖಾ ತಂಡ ಬಂಧಿಸಿದೆ.
ಸದ್ಯ ಆರೋಪಿ ಚಿನ್ನಯ್ಯನನ್ನು ಪೊಲೀಸರು ಬೆಳ್ತಂಗಡಿಯಲ್ಲಿ ಮೆಡಿಕಲ್ ಟೆಸ್ಟ್ ಗಾಗಿ ಕರೆದುಕೊಂಡು ಹೋಗಿದ್ದು, ಅಲ್ಲಿಂದ ನೇರವಾಗಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ತಮ್ಮ ವಶಕ್ಕೆ ಹೆಚ್ಚಿನ ವಿಚಾರಣೆಗೆ ಎಸ್‌ಐಟಿ ಅಧಿಕಾರಿಗಳು ಕೇಳುವ ಸಾಧ್ಯತೆ ಇದೇ.ಧರ್ಮಸ್ಥಳದಲ್ಲಿ ಶವ ಹೂತಿದೆ ಎಂಬ ಮಾಸ್ಕ್‌ಮ್ಯಾನ್‌ನ ಸುಳ್ಳು ದೂರಿನ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಅವನನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖಾಧಿಕಾರಿ ಜಿತೇಂದ್ರ ದಯಾಮ ಮತ್ತು ಸುಮಾರು 25 ಪೊಲೀಸರ ತಂಡ ಎಸ್‌ಐಟಿ ಠಾಣೆಯಲ್ಲಿ ತೀವ್ರ ವಿಚಾರಣೆ ನಡೆಸಿದ್ದರು. ವಿವಿಧ ಆಯಾಮಗಳಲ್ಲಿ ಅನಾಮಿಕನ ಮುಂದೆ ಪ್ರಶ್ನೆಗಳನ್ನ ಇಟ್ಟಿದ್ದರು ಎನ್ನಲಾಗಿದೆ. ಈ ನಡುವೆ ಎಲ್ಲದಕ್ಕೂ ಆತ ಉತ್ತರವನ್ನು ನೀಡಿಲ್ಲ ಎನ್ನಲಾಗಿದೆ.