ಬಳ್ಳಾರಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶವ ಹೂತು ಹಾಕಿದ್ದಾಗಿ ಮಾಸ್ಕ್ ಮ್ಯಾನ್ ದೂರು ನೀಡಿರುವ ವಿಚಾರವಾಗಿ ಇದೀಗ ದೂರುದಾರರನ್ನು SIT ಅಧಿಕಾರಿಗಳು ಅರೆಸ್ಟ್ ಮಾಡಿ ಕೆಲವೇ ಕ್ಷಣಗಳಲ್ಲಿ ಕೋರ್ಟಿಗೆ ಹಾಜರುಪಡಿಸಲಿದ್ದಾರೆ, ಇದರ ಮಧ್ಯ, ಮಂಗಳೂರು ಜಿಲ್ಲಾ ನ್ಯಾಯಾಲಯದಿಂದ ಜಾಮೀನು ಸಿಕ್ಕರೂ ಧರ್ಮಸ್ಥಳ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ಮನೆಗೆ ಪೊಲೀಸರು ನೋಟಿಸ್ ಅಂಟಿಸಿ ಬಂದಿದ್ದಾರೆ.
ಹೌದು ಸಮೀರ್ ಎಂ.ಡಿ. ಕೋರ್ಟ್‌ಗೆ ನೀಡಿದ ವಿಳಾಸ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಂಡಿಹಟ್ಟಿ ನಿವಾಸಕ್ಕೆ ಶುಕ್ರವಾರ ನೋಟಿಸ್ ನೀಡಲು ತೆರಳಿದಾಗ ಮನೆ ಬಾಗಿಲಿಗೆ ಬೀಗ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಮನೆ ಗೋಡೆಗೆ ನೋಟಿಸ್ ಅಂಟಿಸಿದ್ದಾರೆ. ಪೊಲೀಸರ ಇನ್ನೊಂದು ತಂಡ ಬೆಂಗಳೂರು ಜಿಗಣಿಯಲ್ಲಿರುವ ಹುಲ್ಲಹಳ್ಳಿಯಲ್ಲಿರುವ ಬಾಡಿಗೆ ಮನೆಗೆ ಹೋದಾಗ ಕೂಡ ಮನೆ ಬಾಗಿಲಿಗೆ ಬೀಗ ಹಾಕಿದ್ದ ಹಿನ್ನೆಲೆಯಲ್ಲಿ ಆ ಮನೆ ಗೋಡೆಗೂ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.