ಬೆಂಗಳೂರು : ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ವಿಶೇಷ ಸಾಂರ್ಭಿಕ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಖಾಸಗಿ ಅನುದಾನಿತ ಕಾಲೇಜಿನ ನೌಕರರಿಗೆ ವೈದ್ಯರ ಸಲಹೆ ಮೇರೆಗೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಕುರಿತು ಸರ್ಕಾರವನ್ನು ಉಲ್ಲೇಖ(1)ರಲ್ಲಿ ಕೋರಲಾಗಿತ್ತು.
ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು “ರಾಜ್ಯ ಸರ್ಕಾರಿ ನೌಕರರಿಗೆ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ನೌಕರರಿಗೆ ವೈದ್ಯರ ಸಲಹೆ ಮೇರೆಗೆ ಗರಿಷ್ಟ 06 ತಿಂಗಳುಗಳ ಮಿತಿಗೊಳಪಟ್ಟು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಮಂಜೂರು ಮಾಡಿರುವಂತೆಯೇ ಖಾಸಗಿ ಅನುದಾನಿತ ಶಿಕ್ಷಣ ಸಿಬ್ಬಂದಿಗಳಿಗೆ ಸ್ವಯಂ ಚಾಲಿತವಾಗಿ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಪ್ರಸ್ತಾವನೆಯನ್ನು ಪರಿಗಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಸಂದರ್ಭಗಳಲ್ಲಿ ಸಂಬಂಧಪಟ್ಟ ಸಿಬ್ಬಂದಿಗಳಿಗೆ ಲಭ್ಯವಿರುವ ಅಸಾಧಾರಣ ರಜೆಗಳನ್ನು ಒಳಗೊಂಡಂತೆ ಎಲ್ಲಾ ರಜೆಗಳನ್ನು ಮೊದಲು ಬಳಸಿಕೊಂಡು ನಂತರ ಅಗತ್ಯವಿದ್ದರೆ ಆರ್ಥಿಕ ಇಲಾಖೆಯ ಸಹಮತಿ ಪಡೆದು ವಿಶೇಷ ಸಾಂದರ್ಭಿಕ ರಜೆಗಳನ್ನು ಮಂಜೂರು ಮಾಡುವ ಬಗ್ಗೆ ಪರಿಶೀಲಿಸಬಹುದಾಗಿದೆ ” ಎಂದು ನಿರ್ದೇಶಿಸಿದೆ.
ಮೇಲ್ಕಂಡಂತೆ ಸರ್ಕಾರವು ತಿಳಿಸಿರುವ ಹಿನ್ನೆಲೆಯಲ್ಲಿ ಖಾಸಗಿ ಅನುದಾನಿತ ಶಿಕ್ಷಣ ಸಿಬ್ಬಂದಿಗಳಿಗೆ ರಜೆ ಸೌಲಭ್ಯ ಮಂಜೂರಾತಿ ಸಂಬಂಧ ಅಗತ್ಯ ಕ್ರಮವಹಿಸುವಂತೆ ಈ ಮೂಲಕ ತಿಳಿಸಲಾಗಿದೆ.