ಕಲಬುರಗಿ: ಗುಟ್ಕಾ ತಿನ್ನಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹೌದು, ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಗುಟ್ಕಾ ತಿನ್ನಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ 16 ವರ್ಷದ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ರೋಹಿತ್ ಮಣ್ಣಾಂಕಲಗಿ ಆತ್ಮಹತ್ಯೆ ಮಾಡಿಕೊಂಡ ಬಾಲಕ ಕರ್ಜಗಿ ಗ್ರಾಮದ ರೋಹಿತ್ 9ನೇ ತರಗತಿಯಲ್ಲಿ ಓದುತ್ತಿದ್ದ. ಅಜ್ಜಿ ಮನೆಯಲ್ಲಿದ್ದ ರೋಹಿತ್ ಗುಟ್ಕಾ ತಿನ್ನುವ ವಿಚಾರ ಅಜ್ಜಿಗೆ ಗೊತ್ತಾಗಿದ್ದು, ಗುಟ್ಕಾ ತಿನ್ನಬೇಡ ಎಂದು ಬುದ್ಧಿವಾದದ ಹೇಳಿದಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಅಫಜಲಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.