ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬಾಶೆಟ್ಟಿ ಪಟ್ಟಣದ ಹೆದ್ದಾರಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿ ಹಳ್ಳಿಯಲ್ಲಿ ರಸ್ತೆಯಿಂದ ಬೈಕ್ ಸಮೇತ ಸವಾರನನ್ನು ಲಾರಿ ಸೈಡಿಗೆ ಎಳೆದೊಯ್ದಿದೆ. ಅಪಘಾತದ ರಭಸಕ್ಕೆ ಲಾರಿಯ ಮುಂಭಾಗ ಹಾಗೂ ಬೈಕ್ ಸಂಪೂರ್ಣವಾಗಿ ನಜ್ಗುಗುಜ್ಜಾಗಿದೆ. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ಬೈಕ್ ಸವಾರನ ಶವ ಶಿಫ್ಟ್ ಮಾಡಲಾಗಿದೆ.ಮೃತ ಬೈಕ್ ಸವಾರನ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.