ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಬೈಕ್ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಅಪಘಾತ ನಡೆದಿದೆ.
ಬೈಕ್ನಲ್ಲಿದ್ದ ಫಾರೆಸ್ಟ್ ಗಾರ್ಡ್ ಕೆಂಪರಾಜು, ಸೆಂಟ್ರಿಂಗ್ ಕೆಲಸ ಮಾಡುವ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.