ಶಿವಮೊಗ್ಗ: ಶಿವಮೊಗ್ಗದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ತಾನೇ ಜನ್ಮ ನೀಡಿದ ನವಜಾತ ಶಿಶುವಿನ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಆ.16ರಂದು ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿತ್ತು. ಇದೀಗ ಘಟನೆಗೆ ಸಂಬಂಧಿಸಿದಂತೆ ನವಜಾತ ಶಿಶುವಿನ ಕತ್ತು ಕೊಯ್ದು ಕೊಂದಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.
ಒಂದು ದಿನದ ಗಂಡು ಮಗುವನ್ನು ಕತ್ತು ಸೀಳಿ ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾದ ಹಿನ್ನೆಲೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ತಿಮ್ಲಾಪುರದ ಶೈಲಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.