ಮೈಸೂರು : ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ? ಎಂದು ಸಾಹಿತಿ ಬಾನು ಮುಷ್ತಾಕ್ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಪೋಸ್ಟ್ ಹಂಚಿಕೊಂಡಿರುವ ಅವರು, 2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಬಾನು ಮುಷ್ತಾಕ್ ಮಾತನಾಡಿದ್ದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ ಬೂಕರ್ ಭಾನು? ಎಂದು ಬರೆದು ಅಸಮಾಧಾನ ಹೊರಹಾಕಿದ್ದಾರೆ. ಭಾಷಣದಲ್ಲಿ ಬಾನು ಮುಷ್ತಾಕ್ ಕನ್ನಡ ಬಾವುಟದ ಬಗ್ಗೆ ಅಸಮಾಧಾನ ಹೊರಹಾಕಿದ್ದು, ಈಗ ಕನ್ನಡಿಗರ ಆಕ್ರೋಶಕ್ಕೂ ಗುರಿಯಾಗಿದೆ.
ಬಾನು ಮುಸಲ್ಮಾನರು ಎಂಬ ಕಾರಣಕ್ಕೆ ನಾನು ಈ ಮಾತನ್ನು ಹೇಳುತ್ತಿಲ್ಲ. ನಿಮ್ಮ ಸಾಧನೆಗೆ ನಮ್ಮ ಹೆಮ್ಮಯಿದೆ. ನಿಮಗೆ ಬೂಕರ್ ಪ್ರಶಸ್ತಿ ಬಂದಿದೆ. ಇದು ರಾಜ್ಯದ ಜನರಿಗೆ ಖುಷಿ ಇದೆ. ಆದರೆ ದಸರಾ ಜಾತ್ಯತೀತತೆಯ ಪ್ರತೀಕ ಅಲ್ಲ, ಇದು ಧಾರ್ಮಿಕ ಆಚರಣೆ. ಇದು ನಮ್ಮ ಹಬ್ಬ. ಮೈಸೂರಿನ ಯದುವಂಶ ವಿಜಯನಗರ ಸಾಮ್ರಾಜ್ಯ ಪತನಗೊಂಡ ನಂತರ ಶ್ರೀರಂಗಪಟ್ಟಣದಲ್ಲಿ ಸಾಮ್ರಾಜ್ಯ ಸ್ಥಾಪನೆ ಮಾಡಿ ಆ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದೆ. ಇಂದಿಗೂ ಕೂಡ ಅರಮನೆಯಲ್ಲಿ ಶಾಸ್ತ್ರೋಕ್ತವಾಗಿ ಎಲ್ಲ ವಿಧಿವಿಧಾನಗಳು ನಡೆಯುತ್ತವೆ.
ಭಾನುವಾರ (ಆ.24) ಈ ಕುರಿತು ಪ್ರತಾಪ ಸಿಂಹ ಮಾಧ್ಯಮದವರೊಂದಿಗೆ ಮಾತನಾಡಿ, ಇತ್ತೀಚಿಗಷ್ಟೇ ಹಾರ್ಟ್ ಲ್ಯಾಂಪ್ ಸಾಹಿತಿ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಪಡೆದ ಬಾನು ಮುಷ್ತಾಕ್ ಅವರಿಗೆ ಅಭಿನಂದನೆಗಳು. ನೀವು ಈ ಪ್ರಶಸ್ತಿ ಪಡೆದ ಮೊದಲ ಕನ್ನಡತಿಯಾಗಿದ್ದೀರಿ. ಈ ಕುರಿತು ನಮಗೆ ಬಹಳ ಹೆಮ್ಮೆಯಿದೆ. ರಾಜ್ಯ ಸರ್ಕಾರ ಬಾನು ಮುಷ್ತಾಕ್ ಅವರನ್ನು ನಾಡಹಬ್ಬ ದಸರಾದ ಉದ್ಘಾಟನೆಗೆ ಆಹ್ವಾನಿಸಿದೆ. ಅವರು ಕೂಡ ಒಪ್ಪಿಕೊಂಡಿದ್ದಾರೆ.