ಬೆಂಗಳೂರು: ನಗರದಲ್ಲಿ ಗಣೇಶ ಹಬ್ಬದ ತಯಾರಿ ಚೋರಾಗಿಯೇ ನಡೆದಿದೆ. ಇದೇ ವೇಳೆಯಲ್ಲಿ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಬೆಂಗಳೂರಿಗರಿಗೆ ಎಚ್ಚರಿಕೆ ಎನ್ನುವಂತೆ ಗಣೇಶೋತ್ಸವಕ್ಕೆ ಬಲವಂತವಾಗಿ ಚಂದಾ ವಸೂಲಿ ಮಾಡಿದ್ರೆ ಅಂತವರ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಇಂದು ಬೆಂಗಳೂರಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಕ್ರಮ ವಹಿಸಲು ಡಿಸಿಪಿ, ಎಸಿಪಿಗಳ ಜೊತೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸಭೆ ನಡೆಸಿದರು. ಈ ಬಳಿಕ ಮಾತನಾಡಿದಂತ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರು, ಎಲ್ಲಾ ವಿಭಾಗದ ಡಿಸಿಪಿಗಳು, ಎಸಿಪಿಗಳ ಜೊತೆಗೆ ಸಭೆ ಮಾಡಿದ್ದೇನೆ. ನಿಯಮ ಉಲ್ಲಂಘನೆಯಾದರೇ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.
ಬಲವಂತವಾಗಿ ಯಾರೂ ಸಹ ಚಂದಾ ವಸೂಲಿ ಮಾಡುವಂತಿಲ್ಲ. ಬಲವಂತವಾಗಿ ವಸೂಲಿ ಮಾಡಿದ್ರೆ ಪ್ರಕರಣ ದಾಖಲಿಸಲಾಗುತ್ತದೆ. ಇದುವರೆಗೂ ಆ ರೀತಿಯ ಯಾವುದೇ ದೂರುಗಳು ಬಂದಿಲ್ಲ. ಭದ್ರತೆ ವಿಚಾರದಲ್ಲಿ ಎಲ್ಲಾ ಸಿಬ್ಬಂದಿಗೂ ಕ್ರಮಕ್ಕೆ ಸೂಚಿಸಲಾಗಿದೆ ಎಂಬುದಾಗಿ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ತಿಳಿಸಿದರು.
ಸೆ.1ರ ಮಧ್ಯರಾತ್ರಿಯೇ ನನ್ನ ಜನ್ಮದಿನ ಆಚರಣೆ: ಅಭಿಮಾನಿಗಳಿಗೆ ‘ನಟ ಕಿಚ್ಚ ಸುದೀಪ್’ ಪತ್ರ | Actor Kiccha Sudeep
ಸುಪ್ರಸಿದ್ಧ ಸಾಗರದ ‘ಮಾರಿಕಾಂಬಾ ಜಾತ್ರಾ ಮಹೋತ್ಸವ’ಕ್ಕೆ ಮುಹೂರ್ತ ಫಿಕ್ಸ್