ಬೆಂಗಳೂರು : ಅನುಕಂಪ ಆಧಾರದ ಮೇಲೆ ನೇಮಕಗೊಂಡಿರುವ ಅಭ್ಯರ್ಥಿಗಳಿಗೆ ಪ್ರಥಮ ವೇತನ ಪ್ರಮಾಣ ಪತ್ರ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಅನುಕಂಪ ಆಧಾರದ ನೇಮಕಾತಿ ನಿಯಮಗಳು 1996ರಲ್ಲಿನ ಎಲ್ಲಾ ಷರತ್ತುಗಳನ್ನು ಪೂರೈಸಿದ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ಅಭ್ಯರ್ಥಿಗಳಿಗೆ ಉಲ್ಲೇಖ (2)ರ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ 2011 ಹಾಗೂ 2017ರಲ್ಲಿ ತಿದ್ದುಪಡಿಯಾದಂತೆ ನೇಮಕಾತಿ ನೀಡಲಾಗಿತ್ತು, ಅಭ್ಯರ್ಥಿಗಳು ನೇಮಕಾತಿ ಮಾಡಿದ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗಿರುತ್ತಾರೆಂದು ಮತ್ತು ಸದರಿ ನೌಕರರಿಗೆ ಪ್ರಥಮ ವೇತನ ಪ್ರಮಾಣ ಪತ್ರ ನೀಡಲು ಸಂಬಂಧಪಟ್ಟ ಸಂಸ್ಥೆಯ ಮುಖ್ಯಸ್ಥರು ಉಲ್ಲೇಖ (4)ರಂತೆ ಮನವಿಗಳನ್ನು ಸಲ್ಲಿಸಿರುತ್ತಾರೆ.