ಬೆಂಗಳೂರು : ಬೆಂಗಳೂರಿನಲ್ಲಿ ರಾತ್ರೋರಾತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ.
ಯಲಹಂಕ ವಿಧಾನಸಭಾ ಕ್ಷೇತ್ರದ ಬಾಗಲೂರು ಬಸ್ ನಿಲ್ದಾಣದ ಬಳಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯ ಗುಣಮಟ್ಟವನ್ನು ಖುದ್ದು ಪರಿಶೀಲಿಸಿದ್ದಾರೆ. ರಸ್ತೆಗುಂಡಿಗಳನ್ನು ಕೂಡಲೇ ಮುಚ್ಚಿ, ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
https://twitter.com/DKShivakumar/status/1960084220967375017
ರಸ್ತೆ ಗುಂಡಿಗಳ ಬಗ್ಗೆ ಸಾರ್ವಜನಿಕರು ಸುಲಭವಾಗಿ ಮಾಹಿತಿ ನೀಡಲು, ‘ಗುಂಡಿ ಗಮನ’ ಎಂಬ ಮೊಬೈಲ್ ಆ್ಯಪ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಅಪ್ಲಿಕೇಶನ್ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಬಗ್ಗೆ ಮಾಹಿತಿ ನೀಡಿದರೆ, ನಾವು ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುತ್ತೇವೆ ಎಂದು ತಿಳಿಸಿದ್ದಾರೆ.