ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಮುಖ ಆರೋಪಿ ಆಗಿರುವಂತಹ ಜಗದೀಶ್ ಅಲಿಯಾಸ್ ಜಗ್ಗನನ್ನು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪ್ರಮುಖ ಆರೋಪಿ ಆಗಿರುವಂತಹ ಜಗ್ಗ ಕೊಲೆಯಾದ ದಿನವೇ ಭಾರತ ಬಿಟ್ಟು ದುಬೈಗೆ ಪರಾರಿಯಾಗಿದ್ದ. ಇದೀಗ ಸಿಐಡಿ ಅಧಿಕಾರಿಗಳು ಆರೋಪಿ ಜಗ್ಗನನ್ನು ಬಂಧಿಸಿದ್ದಾರೆ.
ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಗದೀಶ್ ಅಲಿಯಾಸ್ ಜಗ್ಗನಿಗೆ ಸಿಐಡಿ ಪೋಲೀಸರು ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದ್ದು, ಕೆಲ ದಿನಗಳಿಂದ ಆರೋಪಿಗಾಗಿ ಹುಡುಕಾಟ ನಡೆಸಿದ್ದು, ಇಂದು ಆರೋಪಿ ಜಗ್ಗನನ್ನು ಬಂಧಿಸಲಾಗಿದೆ.
ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದ್ದು, ಬೈರತಿ ಬಸವರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಭಾರತಿನಗರ ಠಾಣೆಯಲ್ಲಿ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾಜಿ ಸಚಿವ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ. ಜಗದೀಶ್ ಎ1, ಕಿರಣ್ ಎ2, ವಿಮಲ್ ಎ 3, ಅನಿಲ್ ಎ4 ರೋಪಿಗಳಾಗಿದ್ದಾರೆ.