ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಂತ ಜಗದೀಶ್ ನನ್ನು ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಗೆ 10 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಇಂದು ಪ್ರಕರಣದ ವಿಚಾರಣೆ ನಡೆಸಿದಂತ 1ನೇ ಎಸಿಜೆಎಂ ಕೋರ್ಟ್ ಈ ತೀರ್ಪು ನೀಡಿದೆ.
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದಂತ ಜಗದೀಶ್ ನನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಸಿಐಡಿ ವಶಕ್ಕೆ ಪಡೆದಿತ್ತು. ಆತನ ವಿರುದ್ಧ ಕೊಲೆ ಕೇಸ್, ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಎ.1 ಆರೋಪಿಯನ್ನು ಬೆಂಗಳೂರಿನ ಎಸಿಜೆಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದಂತ 1ನೇ ಎಸಿಜೆಎಂ ಕೋರ್ಟ್ ಸಿಐಡಿ ಮನವಿಯ ಮೇರೆಗೆ ಹೆಚ್ಚಿನ ವಿಚಾರಣೆ ನಡೆಸಲು 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.
ಅಂದಹಾಗೇ ಕಳೆದ ಜುಲೈ.15ರಂದು ಬೆಂಗಳೂರಿನ ಭಾರತಿನಗರದಲ್ಲಿ ಬಿಕ್ಲು ಶಿವ ಕೊಲೆಯಾಗಿತ್ತು. ಈ ಕೊಲೆಯಲ್ಲಿ ಜಗದೀಶ್ ಎ.1 ಆರೋಪಿಯಾಗಿದ್ದರು. ಕೊಲೆಯ ಬಳಿಕ ಚೆನ್ನೈ ಏರ್ ಪೋರ್ಟ್ ಮೂಲಕ ದುಬೈಗೆ ಎಸ್ಕೇಪ್ ಆಗಿದ್ದನು.
ನನ್ನಷ್ಟು ಕನ್ನಡ ಬಳಸಿ ಸಾಧನೆ ಮಾಡಿದವರು ಮಾತ್ರ ನನ್ನ ಟೀಕಿಸಬಹುದು: ಬಾನು ಮುಷ್ತಾಕ್ ತಿರುಗೇಟು
‘QR ಕೋಡ್’ ಸ್ಕ್ಯಾನ್ ಮಾಡಿ, ‘ಆಸ್ತಿ ಮಾಹಿತಿ, ನೋಂದಣಿ ಮತ್ತು ಬಾಡಿಗೆ ಒಪ್ಪಂದ’ ಪಡೆಯಿರಿ, ಸರ್ಕಾರದ ಹೊಸ ಯೋಜನೆ