ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.
5 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ 10ನೇ ತರಗತಿ ನಂತರದ ಕೋರ್ಸ್/ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ.
ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ಹೆಚ್ಚಾಗಿ ವಾಸಿಸುವ ಕಾಲೋನಿಗಳಲ್ಲಿ ಚರಂಡಿ ಹಾಗೂ ಸಿಸಿ ರಸ್ತೆ ಕಾಮಗಾರಿ, ಮೂಲಭೂತ ಸೌಕರ್ಯಗಳು, ವಸತಿ ರಹಿತರಿಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಮೂಲಕ ಮನೆಗಳ ನಿರ್ಮಾಣ ಮಾಡಲು ರೂ.1.20 ಲಕ್ಷಗಳ ಸಹಾಯಧನ, 1 ರಿಂದ 10 ನೇ ತರಗತಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. 2000 ಹಾಗೂ ಮೆಟ್ರಿಕ್ ನಂತರದ ಐಟಿಐ, ಪಿಯುಸಿ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.3000, ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ರೂ.4000 ಹಾಗೂ ತಾಂತ್ರಿಕ ವೃತ್ತಿಪರ ಕೊರ್ಸ್ಗಳಿಗೆ ರೂ. 5000 ವಿಶೇಷ ಸಹಾಯ ಧನ ನೀಡಲಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08182-222129 ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಬೆಂಗಳೂರಲ್ಲಿ ಗಣೇಶ ಮೂರ್ತಿ ವಿಸರ್ಜನೆಗಾಗಿ 41 ಕಲ್ಯಾಣಿ, 489 ಮೊಬೈಲ್ ಟ್ಯಾಂಕ್ ವ್ಯವಸ್ಥೆ
WATCH VIDEO : ನದಿಗೆ ಜಾರಿಬಿದ್ದ ಇಬ್ಬರನ್ನ ರಕ್ಷಿಸಿದ ಕೇಂದ್ರ ಸಚಿವ ‘ಕಿರಣ್ ರಿಜಿಜು’, ನೆಟ್ಟಿಗರಿಂದ ಭಾರೀ ಪ್ರಶಂಸೆ