ಹಾಸನ: ನಾನು ಕೋಟಿಗಟ್ಟಲೆ ಕನ್ನಡಿಗರ ಪ್ರೀತಿ, ಅಭಿಮಾನವನ್ನು ಪಡೆದಿದ್ದೇನೆ. ಇಂತಹುದ್ದರ ನಡುವೆ ಒಂದಿಬ್ಬರ ನಕಾರಾತ್ಮಕ ಟೀಕೆ, ಪ್ರತಿಕ್ರಿಯೆಗಳಿಗೆ ಉತ್ತರವನ್ನು ಕೊಡುವ ಅಗತ್ಯವಿಲ್ಲ. ಕೋಟಿ ಕನ್ನಡಿಗರ ಪ್ರೀತಿಯ ಮುಂದೆ ಒಂದಿಬ್ಬರ ಟೀಕೆ ಲೆಕ್ಕಕ್ಕಿಲ್ಲ ಎಂಬುದಾಗಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನಗೆ ಕೋಟ್ಯಾಂತರ ಕನ್ನಡಿಗರು ತಮ್ಮ ಪ್ರೀತಿಯನ್ನು ತೋರಿಸುತ್ತಿದ್ದಾರೆ. ಅಭಿಮಾನವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಎಲ್ಲೋ ಒಂದಿಬ್ಬರು ನೆಗೆಟಿವಿಟಿಗೆ ಯಾಕೆ ಪ್ರತಿಕ್ರಿಯೆ ನೀಡಬೇಕು? ಅದರ ಅಗತ್ಯವೇ ಇಲ್ಲ. ಈ ಟೀಕೆಗೆ ಜನರೇ ಪ್ರತಿಕ್ರಿಯೆ ಕೊಡುತ್ತಾರೆ ಎಂದರು.
ರಾಜಕೀಯ ಮಾಡೋದಕ್ಕೆ ವಿರೋಧ ಪಕ್ಷ, ಆಡಳಿತ ಪಕ್ಷ ಅಂತ ಇರಬೇಕು. ಆದರೇ ಯಾವ ವಿಚಾರದಲ್ಲಿ ರಾಜಕೀಯ ಮಾಡಬೇಕೋ ಅದರಲ್ಲಿ ಮಾಡಬೇಕು. ಆ ಬಗ್ಗೆ ಪ್ರಜ್ಞೆ ಸಕ್ರೀಯ ರಾಜಕಾರಣದಲ್ಲಿರುವಂತವರಿಗೆ ಇರಬೇಕು ಎಂಬುದಾಗಿ ತಮ್ಮನ್ನು ಟೀಕಿಸಿದ ರಾಜಕಾರಣಿಗಳಿಗೆ ಕುಟುಕಿದರು.
ನಾನು ಬಿಜೆಪಿ ಪಕ್ಷದಲ್ಲಿ ಮೈಸೂರು ಸಂಸದ ಯದುವೀರ್ ಅವರಂತಹ ಸಂತತಿ ಹೆಚ್ಚಾಗಲಿ ಎಂಬುದಾಗಿ ಆಪೇಕ್ಷೆ ಪಡುತ್ತೇನೆ. ಒಂದು ಸಮತೋಲನದಿಂದ ವಿಷಯ ಅನ್ವೇಷಣೆ ಮಾಡಿ ಆ ಬಗ್ಗೆ ದ್ವಂದ್ವ ಇಲ್ಲದಂತೆ ಹೇಳಿಕೆ ನೀಡಬೇಕು. ಅವರವರ ಮಟ್ಟಕ್ಕೆ ತಕ್ಕಂತೆ ಅವರು ಮಾತನಾಡುತ್ತಾರೆ. ಮಾತನಾಡಲಿ ಬಿಡಿ ಎಂಬುದಾಗಿ ತಿರುಗೇಟು ನೀಡಿದರು.
ಶಿವಮೊಗ್ಗ ವಿಮಾನ ನಿಲ್ದಾಣದಿಂದ 1 ಲಕ್ಷ ಪ್ರಯಾಣಿಕರಿಗೆ ಸುಗಮ ಸೇವೆ, ಸದ್ಯದಲ್ಲೇ MRO ಆರಂಭ: ಸಚಿವ ಎಂ.ಬಿ ಪಾಟೀಲ
ಅದು ದೇವರ ಹಾಡು ಅದನ್ನ ನೀವು ಹೇಂಗೆ RSS ಗೀತೆ ಅಂತೀರಾ?: ಶಾಸಕ ಕೆ.ಎಂ ಉದಯ್ ಪ್ರಶ್ನೆ