ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿ ತೀವ್ರ ವಿಚಾರಣೆ ಒಳಪಡಿಸಿದ್ದು ಸ್ಫೋಟಕವಾದ ಮಾಹಿತಿ ಬಾಯಿ ಬಿಟ್ಟಿದ್ದಾನೆ. ಬುರುಡೆ ಗ್ಯಾಂಗ್ ಧರ್ಮಸ್ಥಳದ ವಿರುದ್ಧ ತನಿಖೆ ನಡೆಸಲು ಸರ್ಕಾರಕ್ಕೆ ಒತ್ತಡ ಇರುವಂತೆ ಸ್ವಾಮೀಜಿಗಳ ಮೊರೆ ಹೋಗಲಾಗಿತ್ತು ಎಂದು ಹೇಳಿಕೆ ನೀಡಿದ್ದಾನೆ.
ಹೌದು ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯ, ಇದೀಗ ಮತ್ತೊಂದು ಸ್ಫೋಟಕ ಮಾಹಿತಿಯನ್ನು ಎಸ್‌ಐಟಿ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬುರುಡೆ ಗ್ಯಾಂಗ್ ಸ್ವಾಮೀಜಿಯೊಬ್ಬರನ್ನು ಭೇಟಿ ಮಾಡಿತ್ತು ಎನ್ನುವ ಸ್ಫೋಟಕ ಮಾಹಿತಿಯನ್ನು ಚಿನ್ನಯ್ಯ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ.
ಇದೊಂದು ಹಿಂದೂ ವಿರೋಧಿ ಹೋರಾಟ ಎಂದು ಗುರುತಿಸಿಕೊಳ್ಳಬಾರದು ಎನ್ನುವ ಕಾರಣಕ್ಕೆ ಸ್ವಾಮೀಜಿಯನ್ನು ಭೇಟಿ ಮಾಡಿದ ತಂಡ, ಸರ್ಕಾರಕ್ಕೆ ಒತ್ತಡ ಹೇರಲು ಮುಂದಾಗಿತ್ತು. ಸ್ವಾಮೀಜಿ ಮೂಲಕ ಧರ್ಮಸ್ಥಳ ಪ್ರಕರಣದ ತನಿಖೆ ತಮ್ಮ ಯೋಜನೆಯಂತೆಯೇ ಮುಂದೆ ಸಾಗಲು ಪ್ಲ್ಯಾನ್ ಮಾಡಿತ್ತು. ಸ್ವಾಮೀಜಿ ಮೂಲಕ ಸರ್ಕಾರಕ್ಕೆ ಒತ್ತಡ ಹಾಕುವುದು, ಈ ಹೋರಾಟದಲ್ಲಿ ಇಡೀ ಹಿಂದೂ ಸಮುದಾಯ ತಮ್ಮ ಜೊತೆ ಇದೆ ಎಂದು ಬಿಂಬಿಸಲು ಪ್ಲ್ಯಾನ್ ಮಾಡಲಾಗಿತ್ತು ಎನ್ನುವ ಮಾಹಿತಿಯನ್ನು ಚಿನ್ನಯ್ಯ ಬಯಲು ಮಾಡಿದ್ದಾನೆ.
ಸೌಜನ್ಯ ಪ್ರಕರಣ ಮುಂದಿಟ್ಟುಕೊಂಡು ಸ್ವಾಮೀಜಿಯನ್ನು ಈ ಗ್ಯಾಂಗ್ ಭೇಟಿ ಮಾಡಿ, ಇಡೀ ಪ್ರಕರಣವನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿತ್ತು. ಸೌಜನ್ಯ ಪ್ರಕರಣದ ರೀತಿಯಲ್ಲೇ ಶವಗಳನ್ನು ಹೂತಿರುವ ಕೇಸ್ ಇದು. ಧರ್ಮಸ್ಥಳದಲ್ಲಿ ನಿರಂತರವಾಗಿ ಈ ರೀತಿ ಪ್ರಕರಣಗಳು ನಡೆಯುತ್ತಿದೆ ಎಂದು ಸ್ವಾಮೀಜಿ ಮುಂದೆ ವಿವರಣೆ ನೀಡಿತ್ತು ಎಂದು ಹೇಳಲಾಗಿದೆ.