ಹಾಸನ : ಹಾಸನದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹಾಸನದ ದೊಡ್ಡ ಮಂಡಿಗನಹಳ್ಳಿ ನಿವಾಸಿ ಅಂಕಿತ್ (26) ಎನ್ನುವ ಆಟೋ ಚಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.
ನಿನ್ನೆ ರಾತ್ರಿ ಅಂಕಿತ್ ಬೈಕ್ನಲ್ಲಿ ರಾಗಿ ಮುದ್ದನಹಳ್ಳಿ ಕಡೆಗೆ ಹೋಗುತ್ತಿದ್ದ ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.