ಕಲಬುರ್ಗಿ : ನಕಲಿ ವೈದ್ಯರ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕ್ಲಿನಿಕ್ ಗಳ ಮೇಲೆ ಇದೀಗ ಆರೋಗ್ಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ಬಳಿಕ ನಕಲಿ ಕ್ಲಿನಿಕ್ ಗಳನ್ನು ಕ್ಲೋಸ್ ಮಾಡಿ ಬೀಗ ಜಡಿದಿದ್ದಾರೆ.
ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ, ನೆಲೋಗಿ ಗ್ರಾಮದಲ್ಲಿರುವ ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ಮಾಡಿ ಕ್ಲಿನಿಕ್ ಗಳಿಗೆ ಬೀಗ ಹಾಕಿದ್ದಾರೆ. ನಕಲಿ ವೈದ್ಯರು ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರು ಸಾರ್ವಜನಿಕರಿಂದ ದೂರು ಹಿನ್ನೆಲೆ, ಜಿಲ್ಲಾ ಆರೋಗ್ಯ ಅಧಿಕಾರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮತ್ತೆ ಓಪನ್ ಮಾಡಿದರೆ ಆಸ್ತಿ ಮುಟ್ಟುಗೊಲು ಹಾಕುವುದಾಗಿ ಎಚ್ಚರಿಕೆ ನೀಡಿ ನಕಲಿ ಕ್ಲಿನಿಕ್ ಗಳಿಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ.