ಬೆಂಗಳೂರು: ಬಿಜೆಪಿ ನಡೆಸಿದಂತ ಧರ್ಮಸ್ಥಳ ಚಲೋ ಅದು ರಾಜಕೀಯ ಚಲೋ ಹೊರತೇ, ಅದು ಧರ್ಮದ ಚಲೋ ಅಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಇಂದು ತಮ್ಮ ನಿವಾಸದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, “ಇದು ಬಿಜೆಪಿಯ ರಾಜಕೀಯ ಅಜೆಂಡಾ. ಇಂತಹ ಬಿಜೆಪಿ ಅಲ್ಪಸಂಖ್ಯಾತ ಇಲಾಖೆಯನ್ನು ಮುಚ್ಚಿಬಿಡಲಿ. ನಮ್ಮ ದೇಶದ ನಿವಾಸಿಗಳೆಲ್ಲರನ್ನು ನಾವು ಒಪ್ಪಿಕೊಳ್ಳಲೇ ಬೇಕು. ಅವರನ್ನು ದೇಶದಿಂದ ಓಡಿಸಿ ಬಿಡಲು ಆಗುತ್ತದೆಯೇ?” ಎಂದರು.
ಜೆಡಿಎಸ್ ತನ್ನ ಸಾಮಾಜಿಕ ಜಾಲತಾಣದಲ್ಲಿ ನಕಲಿ ಪತ್ರ ಹರಿಬಿಟ್ಟಿರುವ ಬಗ್ಗೆ ಕೇಳಿದಾಗ, “ಅವರು ಯಾವತ್ತಿದ್ದರೂ ಫೇಕ್. ಜೆಡಿಎಸ್ ಎಂದಿಗೂ ಫೇಕ್ ಕೆಲಸಗಳನ್ನೇ ಮಾಡುವುದು. ನಾನು ಹೆದರಿಕೊಂಡು ಬಿಟ್ಟೆ, ರಣಹೇಡಿ ಅಂತಲಾದರೂ ಟೀಕೆ ಮಾಡಿಕೊಳ್ಳಲಿ, ಪರವಾಗಿಲ್ಲ, ಅವರ ದೊಡ್ಡ, ದೊಡ್ಡ ನಾಯಕರುಗಳಿಗೆ ಹೆದರಿಕೊಳ್ಳದವನು ನಾನು. ಈಗ ಈ ಟ್ವೀಟ್ ಗಳಿಗೆ ಹೆದರಿಕೊಳ್ಳುತ್ತೇನೆಯೇ? ವಿಜಯೇಂದ್ರ ಹಾಗೂ ಅಶೋಕ್ ಅವರು ತಮ್ಮ, ತಮ್ಮ ಸಮಾಧಾನಕ್ಕೆ ಮಾತನಾಡುತ್ತಿದ್ದಾರೆ” ಎಂದರು.
ಧರ್ಮಸ್ಥಳ ಚಲೋ ಬಗ್ಗೆ ಕೇಳಿದಾಗ, “ಅದು ರಾಜಕೀಯದ ಚಲೋ. ಧರ್ಮದ ಚಲೋ ಅಲ್ಲ” ಎಂದರು.
ಜೆಡಿಎಸ್ ನಾಯಕರಿಗೆ ಹೆದರಿಲ್ಲ, ಇನ್ನು ಅವರ ಟ್ವೀಟ್ ಗೆ ಹೆದರುತ್ತೇನೆಯೇ?: ಡಿಸಿಎಂ ಡಿ.ಕೆ ಶಿವಕುಮಾರ್ ಗುಡುಗು
ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೆ.1ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ