ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಆಗಸ್ಟ್.30ರವರೆಗೆ ರಾಜ್ಯಾಧ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಭಾರತೀಯ ಹವಾಮಾನ ಇಲಾಖೆಯು, ಆಗಸ್ಟ್.30ರವರೆಗೆ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್.28ರವರೆಗೆ ಗುಡುಗು, ಗಾಳಿ ಸಹಿತ ಸಾಧಾರಣ ಮಳೆಯು ಅಲ್ಲಲ್ಲಿ ಆಗಲಿದೆ ಎಂಬುದಾಗಿ ತಿಳಿಸಿದೆ.
ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ವರುಣ ಆರ್ಭಟಿಸಿದ್ದಾನೆ. ಇದರ ನಡುವೆ ಬೀದರ್ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೀದರ್, ಭಾಲ್ಕಿ, ಔರಾದ್, ಬಸವಕಲ್ಯಾಣ, ಹುಮ್ನಾಬಾದ್ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ವಿವಿಧೆಡೆ ಜನ ಜೀವನ ಅಸ್ತವ್ಯಸ್ಥಗೊಂಡಿದ್ದು, ಬೆಳೆ ನಾಶವಾಗುವಂತ ಭೀತಿಯಲ್ಲಿ ಅನ್ನದಾತರಿದ್ದಾರೆ.
ಬಿಜೆಪಿಯವರ ಧರ್ಮಸ್ಥಳ ಚಲೋ ಅದು ರಾಜಕೀಯದ ಚಲೋ, ಧರ್ಮದ ಚಲೋ ಅಲ್ಲ: ಡಿಕೆಶಿ
ರಾಜ್ಯದ ರೈತರಿಗೆ ಗುಡ್ ನ್ಯೂಸ್: ಸೆ.1ರಿಂದ ಪಹಣಿ ತಿದ್ದುಪಡಿ ವಿಶೇಷ ಅಭಿಯಾನ