ಬೆಂಗಳೂರು: ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿತಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿ, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ.
ಬೆಂಗಳೂರಿನ ಸಂಪಿಗೆಹಳ್ಳಿಯ ಅಗ್ರಹಾರದಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿತಗೊಂಡಿದೆ. ಈ ದುರ್ಘಟನೆಯಲ್ಲಿ ಬಿಹಾರ ಮೂಲದ ಓರ್ವ ಕಟ್ಟಡ ಕಾರ್ಮಿಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಇನ್ನೂ ಓರ್ವ ಕಾರ್ಮಿಕ ಸಾವನ್ನಪ್ಪಿದ್ದರೇ, ಮತ್ತೋರ್ವ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು ದಸರಾ ಹಿಂದೂ ಹಬ್ಬ: ಡಿಸಿಎಂ ಡಿಕೆಶಿಗೆ ಯದುವೀರ ಒಡೆಯರ್ ತಿರುಗೇಟು