ಬೆಂಗಳೂರು: ರಾಜ್ಯದ ಪರಿಶಿಷ್ಟ ಸಮುದಾಯದ ಯುವಕ-ಯುವತಿಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಸಮಾಜ ಕಲ್ಯಾಣ ಇಲಾಖೆಯಿಂದ 2 ಲಕ್ಷದವರೆಗೆ ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದ್ದು, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಐ.ಎಸ್.ಬಿ) ಯ ಅಡಿಯಲ್ಲಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ವ್ಯಾಪಾರದಂತಹ ಇನ್ನಿತರ ಚಟುವಟಿಕೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದಿದೆ.
ಪರಿಶಿಷ್ಟ ಜಾತಿ ಸಮುದಾಯದ ನಿರುದ್ಯೋಗ ಯುವಕ-ಯುವತಿಯರಿಗೆ ಈ ಯೋಜನೆಯಡಿ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಇಲಾಖೆಯ ಆಯಾ ನಿಗಮಗಳಿಂದ ಘಟಕ ವೆಚ್ಚ ಶೇ. 70 ರಷ್ಟು ಮತ್ತು ಗರಿಷ್ಟ ರೂ. 2.00 ಲಕ್ಷ ಸಹಾಯಧನ ನೀಡಲಾಗುವುದು ಎಂದು ಹೇಳಿದೆ.
ಈ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.09.2025 ಆಗಿರುತ್ತದೆ. ಅರ್ಜಿಯನ್ನು ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು: sevasindhu.karnataka.gov.in ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಎಂದು ತಿಳಿಸಿದೆ.
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಐ.ಎಸ್.ಬಿ) ಯ ಅಡಿಯಲ್ಲಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ವ್ಯಾಪಾರದಂತಹ ಇನ್ನಿತರ ಚಟುವಟಿಕೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಸಮುದಾಯದ ನಿರುದ್ಯೋಗ ಯುವಕ-ಯುವತಿಯರಿಗೆ ಈ ಯೋಜನೆಯಡಿ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಇಲಾಖೆಯ ಆಯಾ ನಿಗಮಗಳಿಂದ ಘಟಕ ವೆಚ್ಚ ಶೇ. 70 ರಷ್ಟು ಮತ್ತು… pic.twitter.com/rnkEpKXeSb
— ಸಮಾಜ ಕಲ್ಯಾಣ ಇಲಾಖೆ (@SWDGoK) August 27, 2025
BREAKING: ವಾಲ್ಮೀಕಿ ನಿಗಮ ಹಗರಣ ಕೇಸ್: ಹಲವರ ಆಸ್ತಿ ಮುಟ್ಟುಗೋಲು ಹಾಕಿದ ED
ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ