ಉತ್ತರ ಕನ್ನಡ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ನಾಳೆ ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ.
ಈ ಕುರಿತಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶಿಸಿದ್ದು, ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ 10 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ.
ನಾಳೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ, ಯಲ್ಲಾಪುರ, ದಾಂಡೇಲಿ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಆದೇಶಿಸಿದ್ದಾರೆ.
ಗಮನಿಸಿ : ‘ರೇಷನ್ ಕಾರ್ಡ್’ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ
ಚಿತ್ರದುರ್ಗ: ಚಳ್ಳಕೆರೆ ಪೊಲೀಸರಿಂದ ಪ್ರಕರಣ ದಾಖಲಾದ 24 ಗಂಟೆಯೊಳಗೆ ಆರೋಪಿ ಅರೆಸ್ಟ್