ಬೆಂಗಳೂರು : ಬೆಂಗಳೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಆಗಸ್ಟ್ 30 ಮತ್ತು 31 ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳು ವಿಸರ್ಜನಾ ಕಾರ್ಯಕ್ರಮ ಇರುವುದರಿಂದ ಗಿಡಿ ಗಿಡಿಗಳು ಮಧ್ಯ ಸೇವಿಸಿ ದಾಂದಲೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2025ನೇ ಸಾಲಿನ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮದ ಮೆರವಣಿಗೆಯ ಸಮಯದಲ್ಲಿ ಕೆಲವು ಕಿಡಿಗೇಡಿಗಳು ಮದ್ಯಪಾನದ ಅಮಲಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ತೊಂದರೆ ಮಾಡಬಹುದಾದ ಸಾಧ್ಯತೆಗಳಿರುತ್ತವೆ. ಈ ನಿಟ್ಟಿನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮದ್ಯದಂಗಡಿ, ಬಾರ್ & ರೆಸ್ಟೋರೆಂಟ್ ಮತ್ತು ವೈನ್ಸ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸುವಂತೆ ಸಂಬಂಧಪಟ್ಟ ವಿಭಾಗಗಳ ಉಪ ಪೊಲೀಸ್ ಆಯುಕ್ತರುಗಳು ಉಲ್ಲೇಖಿತ ಪತ್ರಗಳಲ್ಲಿ ಪ್ರತ್ಯೇಕವಾಗಿ ಮನವಿಯನ್ನು ಸಲ್ಲಿಸಿರುತ್ತಾರೆ.
ಮೇಲ್ಕಂಡ ವಿಷಯದ ಬಗ್ಗೆ ನಾನು ಸ್ವತಃ ಪರಿಶೀಲಿಸಲಾಗಿ ಹಾಗೂ ಗುಪ್ತವಾರ್ತಾ ವಿಭಾಗದಿಂದ ಸಂಗ್ರಹಿಸಿದ ಮಾಹಿತಿಯಿಂದ ಸಾಕಷ್ಟು ಸತ್ಯಾಂಶವಿದೆ ಎಂದು ತಿಳಿದುಬಂದಿರುತ್ತದೆ. 2025ನೇ ಸಾಲಿನ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮದ ಮೆರವಣಿಗೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗವುಂಟಾಗದಂತೆ ಅಹಿತಕರ ಘಟನೆಗಳನ್ನು ತಡೆಯುವ ಅವಶ್ಯಕತೆ ಇರುವುದರಿಂದ ಈ ಕೆಳಕಂಡ ವಿಭಾಗಗಳ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅವುಗಳ ಮುಂದೆ ನಮೂದಿಸಲಾದ ದಿನಾಂಕಗಳು ಮತ್ತು ಸಮಯದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸುವುದು ಸೂಕ್ತವೆಂದು ಮನಗಂಡಿರುತ್ತೇನೆ. ಆದ್ದರಿಂದ ಈ ಆದೇಶ-
ಆದೇಶ ಸಂಖ್ಯೆ : ಸಿ.ಎಸ್.ಬಿ.(ಕ್ಷೇತ್ರ)/ಮದ್ಯ ನಿಷೇದಾಜ್ಞೆ/32/2025, ದಿನಾಂಕ: 27-08-2025 ಈ ದಿಸೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ.163 ರ ಉಪ ಕಲಂ (1) ಮತ್ತು (3) ರ ಅನ್ವಯ ಪ್ರದತ್ತವಾದ ಅಧಿಕಾರಿವನ್ನು ಚಲಾಯಿಸಿ ಸೀಮಾಂತ್ ಕುಮಾರ್ ಸಿಂಗ್, ಭಾ.ಪೊ.ಸೇ. ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಆದ ನಾನು ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಈ ಕೆಳಕಂಡ ವಿಭಾಗಗಳ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅವುಗಳ ಮುಂದೆ ನಮೂದಿಸಲಾದ ದಿನಾಂಕಗಳು ಮತ್ತು ಸಮಯದಲ್ಲಿ CL-4 & CL-6A ಪರವಾನಗಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಬಾರ್ & ರೆಸ್ಟೋರೆಂಟ್‌ಗಳು, ವೈನ್ಸ್ ಷಾಪ್ ಗಳು, ಪಬ್‌ಗಳು, ಎಂ.ಎಸ್.ಐ.ಎಲ್. ಮಳಿಗೆಗೆಳು ಸೇರಿದಂತೆ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ಮಾಡುವ ಅಂಗಡಿಗಳನ್ನು ಮುಚ್ಚಲು ಹಾಗೂ ಮಾರಾಟವನ್ನು ಮಾಡದಿರಲು ನಿಷೇಧಾಜ್ಞೆಯನ್ನು ವಿಧಿಸಿರುತ್ತೇನೆ.