ಬೆಂಗಳೂರು: ರಾಜ್ಯದಲ್ಲಿ ಜಾತಿ ಸಮೀಕ್ಷೆ ಆರಂಭಗೊಂಡಿದೆ. ಈ ಹೊತ್ತಿನಲ್ಲಿ ಜನತೆಗೆ ಸರ್ಕಾರವು ಪ್ರಕಟಣೆಯಲ್ಲಿ ಮಹತ್ವದ ಮಾಹಿತಿ ಹಂಚಿಕೊಂಡಿದೆ. ಅದೇನು ಅಂತ ಮುಂದೆ ಓದಿ.
ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜಾತಿಗಳ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ದಿನಾಂಕ: 22.08.2025 ರಂದು ಪತ್ರಿಕೆಗಳಲ್ಲಿ ಪುಕಟಣೆ ನೀಡಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ, ಸಲಹೆ, ಸೂಚನೆಗಳು ಇದ್ದಲ್ಲಿ, 07 ದಿನಗಳ ಒಳಗೆ ನೀಡಲು ಕೋರಲಾಗಿತ್ತು ಎಂದಿದ್ದಾರೆ.
ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಈ ಬಗ್ಗೆ ಸಲಹೆ/ಸೂಚನೆ, ಮನವಿಗಳನ್ನು ನೀಡುವ ಅವಧಿಯನ್ನು ದಿನಾಂಕ: 01.09.2025 ರ ಸಂಜೆ 5.00 ಘಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಈ ಮೂಲಕ ಪಕಟಿಸಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು ಎಂದು ತಿಳಿಸಿದೆ.
ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16 ಡಿ. ಡಿ.ದೇವರಾಜ ಅರಸು ಭವನ, ಮಿಲ್ಲರ್ಸ್ ಟ್ಯಾಂಕ್ ಬೆಡ್ ಏರಿಯಾ, ವಸಂತನಗರ, ಬೆಂಗಳೂರು. ಇ-ಮೇಲ್: kscbcb@gmail.com ಗೆ ಇಮೇಲ್ ಅಥವಾ ವಿಳಾಸಕ್ಕೆ ಕಳುಹಿಸಲು ಸರ್ಕಾರ ಕೋರಿದೆ.
ರಾಜ್ಯದಲ್ಲಿ ‘ಜಲಮೂಲ’ಗಳ ಸಮಗ್ರ ನಿರ್ವಹಣೆಗೆ ಸರ್ಕಾರದಿಂದ ಮಹತ್ವದ ಕ್ರಮ: ‘AI ತಂತ್ರಜ್ಞಾನ’ ಬಳಕೆ
ಆಗಸ್ಟ್.30ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರೋದಿಲ್ಲ | Power Cut