ನವದೆಹಲಿ: 75 ವರ್ಷಕ್ಕೆ ನಿವೃತ್ತಿಯಾಗಬೇಕು ಎಂದು ನಾನು ಯಾರಿಗೂ ಹೇಳಿಲ್ಲ, ನಾನೂ ನಿವೃತ್ತನಾಗಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಆರ್‌ಎಸ್‌ಎಸ್ ಶತಮಾನೋತ್ಸವ ಹಿನ್ನೆಲೆ ಆಯೋಜಿ ಸಲಾಗಿದ್ದ ಕಾರ್ಯಕ್ರಮದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
75 ವರ್ಷದ ಬಳಿಕ ನಿವೃತ್ತಿ ಪಡೆಯಬೇಕು’ ಎಂಬ ಇತ್ತೀಚಿನ ಮಾತುಗಳು ಮೋದಿ ಉದ್ದೇಶಿಸಿ ಇರಬಹುದು ಎಂಬ ಚರ್ಚೆಗಳ ಬೆನ್ನಲ್ಲೇ ಆ ಕುರಿತ ಪ್ರಶ್ನೆಗಳಿಗೆ ಉತ್ತರಿಸಿರುವ ಭಾಗವತ್, ‘ಅಂದು ನಾನು ಆರ್‌ಎಸ್‌ಎಸ್ ನಾಯಕ ಮೋರೋಪಂತ್ ಪಿಂಗಳೆ ಮಾತುಗಳನ್ನು ನೆನಪಿಸಿಕೊಂಡಿದ್ದೆ ಅಷ್ಟೇ. ಆದರೆ ಯಾವತ್ತೂ ನಾನು ನಿವೃತ್ತನಾಗುತ್ತೇನೆ ಅಥವಾ ಬೇರೆಯವರು ಆಗಲಿ ಎಂದಿರಲಿಲ್ಲ’ ಎಂದರು.
ಬಿಜೆಪಿ ಮತ್ತು ಸಂಘದ ನಡುವೆ ಸಂಘರ್ಷದ ಕುರಿತು, ‘ಎರಡೂ ಕಡೆಯವರಿಗೆ ಪರಸ್ಪರ ನಂಬಿಕೆ ಇದೆ. ಎಲ್ಲಾ ವಿಷಯಗಳಲ್ಲೂ ಒಂದೇ ಅಭಿಪ್ರಾಯ ಇರಬೇಕು ಎಂದೇನಿಲ್ಲ. ಹಾಗೆಂದು ಬಿಜೆಪಿ ಜತೆಗೆ ಸಂಘರ್ಷವೂ ಇಲ್ಲ. ನಮ್ಮ ನಡುವೆ ಮತಭೇದ ಇದೆ ಹೊರತು ಮನಭೇದ ಅಲ್ಲ ಎಂದರು.