ಶಿವಮೊಗ್ಗ : ಭಾರೀ ಮಳೆಯ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ, ಸೊರಬ ತಾಲ್ಲೂಕಿನ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಇಂದು ಕೂಡ ಹೆಚ್ಚಿನ ಮಳೆಯಾಗುವ ಸಂಭವ ಇರುವ ಕಾರಣ ದಿನಾಂಕ 29.08.2025 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿವಸಗಳಲ್ಲಿ ತರಗತಿಗಳನ್ನು ನಡೆಸಿ ಪಾಠ ಪ್ರವಚನಗಳನ್ನು ಸರಿದೂಗಿಸಲು ಸೊರಬ ತಹಶೀಲ್ದಾರ ಮಂಜುಳಾ ಹೆಗಡಾಳ ಆದೇಶಿಸಿದ್ದಾರೆ.
ಇನ್ನು ಸಾಗರ ತಾಲ್ಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಿನಾಂಕ 29.08.2025ರ ಇಂದು ತಹಸೀಲ್ದಾರರ ಸೂಚನೆಯಂತೆ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋ಼ಷಿಸಲಾಗಿದೆ. ರಜಾದಿನವನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವಂತೆ ಕ್ಷೇತ್ರಶಿಕ್ಷಣಾಧಿಕಾರಿಗಳಾದ ಪರಶುರಾಮಪ್ಪ ಸೂಚಿಸಿದ್ದಾರೆ.
ವಸಂತ ಬಿ ಈಶ್ವರಗೆರೆ, 9738123234