ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮಾಜಿ ಗವರ್ನರ್ ಡಾ.ಊರ್ಜಿತ್ ಪಟೇಲ್ ಅವರನ್ನು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೂರು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.
ಪಟೇಲ್ ಅವರು ಸೆಪ್ಟೆಂಬರ್ 2016 ರಿಂದ ಡಿಸೆಂಬರ್ 2018 ರವರೆಗೆ ಆರ್ಬಿಐನ 24 ನೇ ಗವರ್ನರ್ ಆಗಿ ಸೇವೆ ಸಲ್ಲಿಸಿದರು. ಗವರ್ನರ್ ಹುದ್ದೆಗೂ ಮುನ್ನ ಅವರು ಆರ್ಬಿಐನ ಡೆಪ್ಯುಟಿ ಗವರ್ನರ್ ಆಗಿದ್ದರು ಮತ್ತು ಇತರ ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು.
ಅವರು ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕ್ (ಎಐಐಬಿ) ನಲ್ಲಿ ಹೂಡಿಕೆ ಕಾರ್ಯಾಚರಣೆಗಳ (ಪ್ರದೇಶ 1) ಉಪಾಧ್ಯಕ್ಷರಾಗಿದ್ದರು, ದಕ್ಷಿಣ ಏಷ್ಯಾ, ಪೆಸಿಫಿಕ್ ದ್ವೀಪಗಳು ಮತ್ತು ಆಗ್ನೇಯ ಏಷ್ಯಾದಾದ್ಯಂತ ಸಾರ್ವಭೌಮ ಮತ್ತು ಸಾರ್ವಭೌಮೇತರ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದರು. ಅವರು ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಫೈನಾನ್ಸ್ ಕಂಪನಿ ಲಿಮಿಟೆಡ್ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ನಿರ್ವಹಣಾ ಸಮಿತಿಯ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ