ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ನೆಲಸಮಗೊಳಿಸಿದಂತ ಬಾಲಕೃಷ್ಣ ಪುತ್ರಿ ಗೀತಾ ವಿರುದ್ಧ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಅಲ್ಲದೇ ಸರ್ಕಾರ ನೀಡಿದಂತ ಅಭಿಮಾನ್ ಸ್ಟುಡಿಯೋವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆಯೂ ಒತ್ತಾಯಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಒಂದು ವೇಳೆ ಮುಟ್ಟುಗೋಲು ಹಾಕಿಕೊಂಡರೇ ಹೀಗೆ ಮಾಡುವುದಾಗಿ ಬಾಲಕೃಷ್ಣ ಪುತ್ರಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಬಾಲಕೃಷ್ಣ ಅವರ ಪುತ್ರಿ ಗೀತಾ ಅವರು, ಅಭಿಮಾನ್ ಸ್ಟುಡಿಯೋ ಜಾಗವನ್ನು ಸರ್ಕಾರ ಮುಟ್ಟಿಗೋಲು ಹಾಕಿಕೊಂಡರೇ ಕೋರ್ಟ್ ಮೊರೆ ಹೋಗುತ್ತೇನೆ. ಕೋರ್ಟ್ ಗೆ ಹೋಗಿ ತಡೆಯಾಜ್ಞೆ ತರುತ್ತೇನೆ ಎಂಬುದಾಗಿ ಹೇಳಿದ್ದಾರೆ.
ಮುಂದಿನ ಎರಡು ದಿನಗಳಲ್ಲಿ ಎಲ್ಲಾ ದಾಖಲೆ ಇಟ್ಟುಕೊಂಡು ಸುದ್ದಿಗೋಷ್ಠಿ ಮಾಡುತ್ತೇನೆ. ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿ ಸ್ಥಳ ನೆಲಸಮ ಸಂಬಂಧ ಎಲ್ಲಾ ಮಾಹಿತಿಯನ್ನು ಜನತೆಯ ಮುಂದೆ ಇಡುವುದಾಗಿ ತಿಳಿಸಿದ್ದಾರೆ.
ರಾಜ್ಯದ SC ಸಮುದಾಯದವರಿಗೆ ಗುಡ್ ನ್ಯೂಸ್: ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ!
ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ `ಡಿಜಿಟಲ್ ರೂಪದಲ್ಲಿ ಸಿಗಲಿವೆ ಭೂದಾಖಲೆ’ಗಳು.!