ಬೆಂಗಳೂರು : ಯಾವುದೇ ಜಾತಿ, ಧರ್ಮದ ಬೇಧವಿಲ್ಲದೆ ಎಲ್ಲ ವರ್ಗದ ಯುವಜನರಿಗೆ ಸಮಾನ ಅವಕಾಶಗಳನ್ನು ನೀಡಿ, ಅವರನ್ನು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸದೃಢವಾಗಿಸಿ, ಸರ್ವರನ್ನು ಒಳಗೊಂಡ ಸಶಕ್ತ ಕರ್ನಾಟಕವನ್ನು ನಿರ್ಮಾಣ ಮಾಡುವಲ್ಲಿ ರಾಜ್ಯ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ.
ಜನಪ್ರಿಯ ಗ್ಯಾರಂಟಿ ಯೋಜನೆಯೊಂದಿಗೆ ಕ್ರೀಡಾ ಕ್ಷೇತ್ರಕ್ಕೂ ಅಪಾರ ಬೆಂಬಲವನ್ನು ನೀಡುತ್ತಿದೆ. ಈವರೆಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಿನ್ನದ ಪದಕ ಗೆದ್ದ ವಿಜೇತರಿಗೆ ₹5 ಲಕ್ಷ , ಬೆಳ್ಳಿ ಪದಕ ಪಡೆದವರಿಗೆ ₹3 ಲಕ್ಷ ಹಾಗೂ ಕಂಚಿನ ಪದಕ ಗೆದ್ದವರಿಗೆ ₹2 ಲಕ್ಷ ನಗದು ಬಹುಮಾನವನ್ನು ಸರ್ಕಾರದಿಂದ ನೀಡಲಾಗುತ್ತಿತ್ತು.
ಆದರೆ, ಕ್ರೀಡಾಪಟುಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವ ಸಲುವಾಗಿ ನಗದು ಪುರಸ್ಕಾರವನ್ನು ಹೆಚ್ಚಿಸಿ, ಚಿನ್ನ ಪದಕ ವಿಜೇತರಿಗೆ ₹7 ಲಕ್ಷ, ಬೆಳ್ಳಿ ಪದಕ ವಿಜೇತರಿಗೆ ₹5 ಲಕ್ಷ ಹಾಗೂ ಕಂಚಿನ ಪದಕ ವಿಜೇತರಿಗೆ ₹3 ಲಕ್ಷ ನೀಡಲು ಸರ್ಕಾರ ನಿರ್ಧರಿಸಿದೆ. ಜೊತೆಗೆ ಬಜೆಟ್‌ನಲ್ಲೂ ಕ್ರೀಡಾಕ್ಷೇತ್ರಕ್ಕೆ ವಿಶೇಷ ಅನುದಾನ, ಬೆಂಬಲವನ್ನು ನೀಡಲಾಗಿದೆ. ಈ ಮೂಲಕ ಯುವ ಜನರ ಏಳಿಗೆಗೆ ಬೆನ್ನುಲುಬಾಗಿ ರಾಜ್ಯ ಸರ್ಕಾರವು ಸದಾ ಇರಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಯಾವುದೇ ಜಾತಿ, ಧರ್ಮದ ಬೇಧವಿಲ್ಲದೆ ಎಲ್ಲ ವರ್ಗದ ಯುವಜನರಿಗೆ ಸಮಾನ ಅವಕಾಶಗಳನ್ನು ನೀಡಿ, ಅವರನ್ನು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಸದೃಢವಾಗಿಸಿ, ಸರ್ವರನ್ನು ಒಳಗೊಂಡ ಸಶಕ್ತ ಕರ್ನಾಟಕವನ್ನು ನಿರ್ಮಾಣ ಮಾಡುವಲ್ಲಿ ರಾಜ್ಯ ಸರ್ಕಾರವು ನಿರಂತರವಾಗಿ ಶ್ರಮಿಸುತ್ತಿದೆ.
ಜನಪ್ರಿಯ ಗ್ಯಾರಂಟಿ ಯೋಜನೆಯೊಂದಿಗೆ ಕ್ರೀಡಾ ಕ್ಷೇತ್ರಕ್ಕೂ ಅಪಾರ… pic.twitter.com/JVwHW3scef
— DIPR Karnataka (@KarnatakaVarthe) August 29, 2025