ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ಹಿರಿಯ ಪತ್ರಕರ್ತರಿಗೆ ಪಿಂಚಣಿ ನೀಡಲಾಗುತ್ತಿದೆ. ಇಂತಹ ಪಿಂಚಣಿ ಪಡೆಯುತ್ತಿರುವಂತ ಪತ್ರಕರ್ತರಿಗೆ ಮಹತ್ವದ ಮಾಹಿತಿ ಎನ್ನುವಂತೆ ಜೀವಂತ ಪ್ರಮಾಣ ಪತ್ರವನ್ನು ಸಲ್ಲಿಸಲು ಸೂಚಿಸಲಾಗಿದೆ.
ಈ ಕುರಿತಂತೆ ವಾರ್ತಾ ಇಲಾಖೆಯಿಂದ ಮಾಹಿತಿ ನೀಡಿದ್ದು, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಸಾಶನ/ವಿಧವಾ ಮಾಸಾಶನ ಪಡೆಯುತ್ತಿರುವ ಪತ್ರಕರ್ತರು ತಮ್ಮ ಜೀವಂತ ಪ್ರಮಾಣ ಪತ್ರವನ್ನು ದೃಢೀಕರಿಸಿ, 2025ರ ಸೆಪ್ಟಂಬರ್ ಅಂತ್ಯದೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ ಇವರಿಗೆ ಸಲ್ಲಿಸುವಂತೆ ತಿಳಿಸಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಸೂಚಿಸಿದೆ.
2025ರ ‘ಏಷ್ಯಾ ಕಪ್’ನಲ್ಲಿ ಭಾರತ ಜರ್ಸಿ ಪ್ರಾಯೋಜಕರಿಲ್ಲದೆ ಆಡುವ ಸಾಧ್ಯತೆ ಇದೆ: ಮೂಲಗಳು | Asia Cup 2025
ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ `ಡಿಜಿಟಲ್ ರೂಪದಲ್ಲಿ ಸಿಗಲಿವೆ ಭೂದಾಖಲೆ’ಗಳು.!