ಬೆಂಗಳೂರು ಗ್ರಾಮಾಂತರ: ಪಟಾಕಿ ಬಾಕ್ಸ್ ಸ್ಪೋಟಗೊಂಡ ಪರಿಣಾಮ ಓರ್ವ ಬಾಲಕ ದುರ್ಮರಣ, ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಮುತ್ತೋರಿನಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಇಂದು ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಪಟಾಕಿ ಬಾಕ್ಸ್ ಸ್ಪೋಟಗೊಂಡ ಪರಿಣಾಮ ಮುತ್ತೂರು ನಿವಾಸಿ ತನುಷ್ ರಾವ್ (15) ಎಂಬ ಬಾಲಕ ಸಾವನ್ನಪ್ಪಿದ್ದಾನೆ.
ಫ್ರೆಂಡ್ಸ್ ಯುವಕರ ಬಳಗದಿಂದ ಗಣೇಶ ವಿಸರ್ಜನೆ ಮೆರವಣಿಗೆ ನಡೆಸಲಾಗುತ್ತಿತ್ತು. ಮೆರವಣಿಗೆ ಮಾಡ್ತಿದ್ದ ಲಿಫ್ಟಿಂಗ್ ವಾಹನದಲ್ಲಿದ್ದ ಪಟಾಕಿ ಬಾಕ್ಸ್ ಸ್ಪೋಟಗೊಂಡಿದೆ. ಲಿಫ್ಟಿಂಗ್ ವಾಹನದ ಸೈಲೆನ್ಸರ್ ಬಿಸಿಯಿಂದ ಬೆಂಕಿ ಹೊತ್ತಿಕೊಂಡಿರುವಂತ ಶಂಕೆ ವ್ಯಕ್ತವಾಗಿದೆ.
ಈ ದುರ್ಘಟನೆಯಲ್ಲಿ ಗಣೇಶ್(16), ಯೋಗೇಶ್(15), ಮುನಿರಾಜು(27) ಹಾಗೂ ನಾಗರಾಜು (35), ಚೇತನ್ ಶಾವಿ(13), ಕಾನ್ಸ್ ಸ್ಟೇಬಲ್ ಜಾಕೀರ್ ಹುಸೇನ್ ಗೆ ಗಾಯವಾಗಿದೆ. ಗಾಯಾಳುಗಳನ್ನು ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪಿಸಿ ಜಾಕೀರ್ ಕೈ ಮತ್ತು ಭುಜಕ್ಕೆ ಗಾಯವಾಗಿದೆ. ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
BIG NEWS: ಶಾಸಕರ ಶಿಫಾರಸು ಆಧರಿಸಿದ ವರ್ಗಾವಣೆ ಅಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
10,000 ಲಂಚ ಸ್ವೀಕಾರದ ವೇಳೆ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿ ಶಶಿಧರ