ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಜಾಮೀನು ರದ್ದು ಹಿನ್ನೆಲೆಯಲ್ಲಿ ಸದ್ಯ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅವರನ್ನು ಬಳ್ಳಾರಿಗೆ ಸ್ಥಳಾಂತರಿಸಬೇಕು ಎಂದು ಪ್ರಸಿಕ್ಯೂಶನ್ ಅರ್ಜಿ ಸಲ್ಲಿಸಿದ್ದು ಇಂದು ಬೆಂಗಳೂರಿನ ಸೇಷನ್ಸ್ ಕೋರ್ಟ್ ನಲ್ಲಿ ಈ ಕುರಿತು ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ನ್ಯಾಯಾಧೀಶರು ಸೆಪ್ಟೆಂಬರ್ 2ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿದರು.
ಹೌದು ನಟ ದರ್ಶನ್ ಅವರನ್ನು ಬಳ್ಳಾರಿಗೆ ಸ್ಥಳಾಂತರಿಸಬೇಕು ಎಂದು ಪ್ರಾಸಿಕ್ಯೂಶನ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ಈ ವಿಚಾರವಾಗಿ ಇಂದು ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಬಳಿಕ ಜಡ್ಜ್ ವಿಚಾರಣೆಯನ್ನು ಸೆಪ್ಟೆಂಬರ್ 2ಕ್ಕೆ ಮುಂದೂಡಿದರು. ಇದೆ ಸಂದರ್ಭದಲ್ಲಿ ನಟ ದರ್ಶನ್ ಅವರಿಗೆ ದಿಂಬು, ಬೆಡ್ ಶೀಟ್ ಸೇರಿದಂತೆ ಇತರೆ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ದರ್ಶನ್ ಪರವಾಗಿ ಅರ್ಜಿ ಸಲ್ಲಿಸಿದ್ದು ಆ ವಿಚಾರಣೆ ಕೂಡ ಮುಂದೂಡಿ ಕೋರ್ಟ್ ಆದೇಶಿಸಿದೆ.