ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ಚಿನ್ನಯ್ಯ ಬಂಧನದ ವಿಚಾರವಾಗಿ ಎಸ್ಐಟಿ ತನಿಖೆ ಚುರುಕುಗೊಳಿಸಿದೆ. ದೂರುದಾರ ಜಯಂತ್ ಮನೆ ಮೇಲೆ ದಾಳಿ ನಡೆಸಿದರುವಂತ ವೇಳೆಯಲ್ಲಿ ಬೆಂಗಳೂರಿನ ನನ್ನ ಮನೆಯಲ್ಲಿ ಮೂರು ದಿನ ಚಿನ್ನಯ್ಯ ಇದ್ದಿದ್ದು ನಿಜ ಎಂಬುದಾಗಿ ಹೇಳಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ದೂರುದಾರ ಜಯಂತ್ ಬೆಂಗಳೂರಿನ ನನ್ನ ಮನೆಯಲ್ಲಿ ಮೂರು ದಿನ ಚಿನ್ನಯ್ಯ ಇದ್ದಿದ್ದು ನಿಜ. ಪ್ರಕರಣ ಇಲ್ಲಿಯವರೆಗೆ ಬರುತ್ತೆ ಎಂದು ನನಗೆ ಗೊತ್ತಿರಲಿಲ್ಲ. ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದು ನಿಜ. ನಾವು ನಾಲ್ಕು ಜನರು ಕಾರಿನಲ್ಲಿ ದೆಹಲಿಗೆ ಹೋಗಿದ್ದೆವು. ನಾನು, ಚಿನ್ನಯ್ಯ, ಸುಜಾತಾ, ಮಟ್ಟಣ್ಣನವರ್ ದೆಹಲಿಗೆ ಹೋಗಿದ್ದೆವು ಎಂಬುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಿಂದ ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದೆವು. ದೆಹಲಿಯಿಂದ ಮಂಗಳೂರಿಗೆ ಬುರುಡೆ ತಂದಿದ್ದೇವೆ. ಒಂದು ವರ್ಷದ ಹಿಂದೆ ಓರ್ವ ಸ್ವಾಮೀಜಿಯನ್ನು ಭೇಟಿ ಆಗಿದ್ದಾರೆ. ಚಿನ್ನಯ್ಯ ಜೊತೆಗೆ ಇದ್ದವರೆಲ್ಲ ಸ್ವಾಮೀಜಿ ಭೇಟಿಯಾಗಿದ್ದಾರೆ. ಯಾವ ಮಠ, ಯಾವ ಸ್ವಾಮೀಜಿ ಎಂದು ಚಿನ್ನಯ್ಯ ಜೊತೆಗಿದ್ದವರೇ ಹೇಳಲಿ ಎಂದರು.
ಈ ಪ್ರಕರಣದಲ್ಲಿ ನಾನು ಯಾವುದೇ ಶಿಕ್ಷೆಯನ್ನು ಅನುಭವಿಸಲು ಸಿದ್ಧ ಎಂಬುದಾಗಿ ತಿಳಿಸಿದ್ದಾರೆ.
BIG NEWS: ರಾಜ್ಯ ಸರ್ಕಾರದಿಂದ ಅಮಾನತ್ತಿನಲ್ಲಿರುವ ‘ಸರ್ಕಾರಿ ನೌಕರ’ರಿಗೆ ‘ಸ್ಥಳ ನಿಯುಕ್ತಿ’ ಕುರಿತು ಮಹತ್ವದ ಆದೇಶ
‘ಹೊಸ ಆನ್ಲೈನ್ ಗೇಮಿಂಗ್ ಕಾಯ್ದೆಗೆ ನ್ಯಾಯಾಲಯಗಳು ಅಡ್ಡಿಯಾಗಲು ಸಾಧ್ಯವಿಲ್ಲ’: ಕರ್ನಾಟಕ ಹೈಕೋರ್ಟ್ ಗೆ ಕೇಂದ್ರ ಸರ್ಕಾರ