ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿ ಸಮೀಪದ ದಿಗಟೆಕೊಪ್ಪ ಗ್ರಾಮದಲ್ಲಿ ಶನಿವಾರ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಜನರೇಟರ್ ಸ್ಪೋಟಗೊಂಡು ವ್ಯಕ್ತಿಯೊಬ್ಬರು ಗಾಯಗೊಂಡಿದ್ದರು. ಇಂತಹ ಗಾಯಾಳು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಆಸ್ಪತ್ರೆಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ, ಗಾಯಾಳುವಿನ ಆರೋಗ್ಯವನ್ನು ವಿಚಾರಿಸಿದರು.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ದಿಗಟೆಕೊಪ್ಪದ ಮಾಸ್ತಿಕಾಂಬಾ ಯುವಕ ಸಂಘದ ಗಣಪತಿ ವಿಸರ್ಜನಾ ಮೆರವಣಿಗೆ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಈ ವಿಸರ್ಜನಾ ಸಂದರ್ಭದಲ್ಲಿ ಬೆಳಕಿನ ವ್ಯವಸ್ಥೆಗಾಗಿ ಅಳವಡಿಸಿಕೊಂಡಿದ್ದ ಜನರೇಟರ್ ಸ್ಪೋಟಗೊಂಡಿತ್ತು. ಈ ವೇಳೆಯಲ್ಲಿ ಸ್ಥಳದಲ್ಲಿದ್ದ ಲೋಕೇಶ್ ಎಂಬುವವರ ಎರಡು ಕಾಲಿಗೆ ಗಾಯವಾಗಿತ್ತು. ತಕ್ಷಣ ಯುವಕ ಸಂಘದ ಸದಸ್ಯರು ಲೋಕೇಶ್ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಕರೆ ತಂದು ಪ್ರಥಮ ಚಿಕಿತ್ಸೆ ಕೊಡಿಸಿದ್ದರು.
ಆ ಬಳಿಕ ಗಾಯಾಳು ಲೋಕೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವಿಷಯ ತಿಳಿದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಶಿವಮೊಗ್ಗದ ಎನ್.ಎಚ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೋಕೇಶ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಬೇಗ ಗುಣಮುಖರಾಗುವಂತೆ ಆಶಿಸಿದರು.
ಬಿಬಿಎಂಪಿ ಹೊಸ ವಾರ್ಡ್ ರಚನೆ ಗೊಂದಲದ ಬಗ್ಗೆ ಮುಖ್ಯ ಆಯುಕ್ತರಿಂದ ಈ ಸ್ಪಷ್ಟನೆ
ರಾಜ್ಯದ ಗಡಿ ತಾಲ್ಲೂಕಿಗೆ ಆರೋಗ್ಯ ರಕ್ಷೆ: ಸೆ.1ಕ್ಕೆ ಭಾಗ್ಯನಗರದಲ್ಲಿ ಸಾಯಿ ಸ್ವಾಸ್ಥ್ಯ ವೆಲ್‌ನೆಸ್ ಸೆಂಟರ್ ಉದ್ಘಾಟನೆ







