ಬೆಂಗಳೂರು : ಮುಸ್ಲಿಂ ಯುವತಿಯರನ್ನು ಮದುವೆಯಾದರೆ ಐದು ಲಕ್ಷ ರು. ಕೊಡುವುದಾಗಿ ಹೇಳಿಕೆ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ಕೊಪ್ಪಳ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಾಗಿರುವ ಎಫ್‌ಐಆರ್ ರದ್ದು ಕೋರಿ ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲಿ ಕೊಪ್ಪಳ ಟೌನ್ ಠಾಣಾ ಪೊಲೀಸರು ಮತ್ತು ದೂರು ನೀಡಿರುವ ಉಮರ್ ಜುನೈದ್ ಖುರೇಷಿ, ಮೈನು ದ್ದೀನ್ ಬೀಳಗಿ ಮತ್ತು ಅಬ್ದುಲ್ ಕಲಾಂ ಅವರನ್ನು ಪ್ರತಿವಾದಿ ಮಾಡಿದ್ದಾರೆ. ವಿಚಾರಣೆ ನಿಗದಿಯಾಗ ಬೇಕಿದೆ. ಕೊಪ್ಪಳದಲ್ಲಿ ಗವಿಸಿದ್ದಪ್ಪ ಎನ್ನುವ ಯುವಕ ಅನ್ಯ ಕೋಮಿನ ಯುವಕರಿಂದ ಕೊಲೆಯಾಗಿದ್ದ. ಕುಟುಂಬದವರಿಗೆ ಸಾಂತ್ವನ ಹೇಳಲು ಆ.10ರಂದು ಯತ್ನಾಳ್ ಕೊಪ್ಪಳಕ್ಕೆ ಬಂದಿದ್ದ ಈ ಹೇಳಿಕೆ ನೀಡಿದ್ದರು. ಬಳಿಕ ವಿವಿಧ ಜಿಲ್ಲೆಗಳ ಪೊಲೀಸ್ ಠಾಣೆಗಳಲ್ಲಿ ಶಾಸಕ ಯತ್ನಾಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು.